ಲಾಲ್‍ಬಾಗ್‍ನಲ್ಲಿ ಕಿತ್ತೂರು ರಾಣಿ ಚಿನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ 218ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 07, (ಕರ್ನಾಟಕ ವಾರ್ತೆ): ಕಿತ್ತೂರು ರಾಣಿ ಚಿನ್ನಮ್ಮ ಹಾಗೂ ಸಂಗೊಳ್ಳಿರಾಯಣ್ಣ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಣೆ ಮಾಡಿದರು. ಇನ್ನೂರು ವರ್ಷಗಳ ಹಿಂದೆ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಆದ್ದರಿಂದ ಇವರಿಬ್ಬರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಲಾಲ್‍ಬಾಗ್‍ನಲ್ಲಿ ಹಮ್ಮಿಕೊಂಡಿದ್ದು, ಇದನ್ನು ಉದ್ಘಾಟಿಸಲು ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಲಾಲ್‍ಬಾಗ್‍ನಲ್ಲಿ ಆಗಸ್ಟ್ 7 ರಿಂದ 18 ರವರೆಗೆ ಹಮ್ಮಿಕೊಳ್ಳಲಾದ ಕಿತ್ತೂರು ರಾಣಿ ಚಿನ್ನಮ್ಮ ಹಾಗೂ ಸಂಗೊಳ್ಳಿರಾಯಣ್ಣ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ರಾಮಲಿಂಗಾರೆಡ್ಡಿ, ಡಾ.ಎಂ.ಸಿ ಸುಧಾಕರ್, ಹರಿಹರ ಪಂಚಮಸಾಲಿ ವೀರಶೈವ ಲಿಂಗಾಯಿತ ಗುರುಗಳಾದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ತೋಟಗಾರಿಕೆ ಇಲಾಖೆಯ ನಿರ್ದೇಶಕರಾದ ರಮೇಶ್ ಡಿ.ಎಸ್., ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
