ತಾಲ್ಲೂಕಿನ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ.ಶಾಸಕ ಎಚ್. ವಿ ವೆಂಕಟೇಶ್.
ಪಾವಗಡ: ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ನಾಲ್ಕು ಕೆ.ಪಿ.ಎಸ್. ಸಿ ಶಾಲೆಗಳು ಆರಂಭವಾಗಲಿವೆ ಎಂದು, ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ತರಲು ಪ್ರಯತ್ನ ಮಾಡುವುದಾಗಿ, ಮಕ್ಕಳು ಶಾಲೆಗಳಿಗೆ ಹೋಗಲು ಬಸ್ ವ್ಯವಸ್ಥೆಯನ್ನು ಸಹ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿವೆ ಎಂದರು.
ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಈಗಾಗಲೇ ಎಂಟು ಜನ ವೈದ್ಯರ ನೇಮಕವಾಗಿದ್ದು , ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲೂಕಿಗೆ 50 ಕೋಟಿ ವಿಶೇಷ ಅನುದಾನ ನೀಡಿದ್ದು 20 ಕೋಟಿ ಹಣವನ್ನು ಪಟ್ಟಣದ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದರು.
ತಾಲೂಕು ಕ್ರೀಡಾಂಗಣದಲ್ಲಿ 06 ಹೈ ಮಾಸ್ಕ್ ಲೈಟ್ ಗಳನ್ನು ಹಾಕಿಸಿಅಭಿವೃದ್ಧಿಪಡಿಸಲಾಗುವುದು ಎಂದರು.
ತಾಲ್ಲೂಕಿಗೆ 35 ಕೋಟಿ ವೆಚ್ಚದಲ್ಲಿ ಮುರಾರ್ಜಿ ಶಾಲೆಗಳು ಮಂಜೂರಾಗಿದ್ದು, ಸಿದ್ದಾಪುರದಲ್ಲಿ ಕಾರ್ಮಿಕ ಶಾಲೆ ನಿರ್ಮಾಣವಾಗಲಿದೆ ಎಂದರು.
ಶೀಘ್ರವೇ ಕೆ.ಎಸ್ಆರ್ ಟಿ ಸಿ ಬಸ್ ಸ್ಟ್ಯಾಂಡ್ ನಿರ್ಮಾಣವಾಗಲಿದೆ ಎಂದು. ರಿಂಗ್ ರೋಡ್ ನಿರ್ಮಾಣಕ್ಕೆ ಡಿ.ಪಿ.ಆರ್ ಮಾಡಲು ಅನುದಾನ ಬಿಡುಗಡೆಯಾಗಿದೆ ಎಂದರು
ಕಾರ್ಯಕ್ರಮ ಉದ್ದೇಶಿಸಿ ತಹಶೀಲ್ದಾರ್ ವರಕರಾಜು ಮಾತನಾಡಿ.
ಚಳುವಳಿಗಳು ಮತ್ತು ಹೋರಾಟಗಳ ಮೂಲಕ ನಮಗೆ ಸ್ವಾತಂತ್ರ್ಯ ದೊರೆತಿದೆ ಎಂದು
ತಾಲೂಕಿನಲ್ಲಿ ನಾಗಣ್ಣ, ನಂಜುಂಡರಾವ್, ತಿಪ್ಪೇಸ್ವಾಮಿ ಸೇರಿದಂತೆ ಹಲವರು ತಾಲೂಕಿನಿಂದ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿ, ಜೀವಪಣಕ್ಕಿಟ್ಟು ಹೋರಾಡಿದ್ದು ಅವರ ಬಲಿದಾನವನ್ನು ನಾವು ನೆನಪಿಸಿಕೊಳ್ಳಬೇಕೆಂದರು.
ಪಾವಗಡ ತಾಲೂಕು ಅಭಿವೃದ್ಧಿಯಾಗುತ್ತಿದ್ದು ಹೊಸದಾಗಿ 2000 ಮೆಗಾ ವ್ಯಾಟ್ ಸೋಲಾರ್ ಪಾರ್ಕ್ ನಿರ್ಮಾಣವಾಗಲಿದ್ದು ವಿಶ್ವದಲ್ಲಿ ಪಾವಗಡ ಪ್ರಥಮ ಸ್ಥಾನ ಪಡೆಯಲಿದೆ ಎಂದರು.
ರಾಯದುರ್ಗ- ತುಮಕೂರು ರೈಲ್ವೆ ಮಾರ್ಗ ಕಾರ್ಯ ಪ್ರಗತಿಯಲ್ಲಿದ್ದು, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆ ಪ್ರಗತಿಯಲ್ಲಿದೆ ಎಂದು ತುಂಗಭದ್ರಾ ಕುಡಿಯುವ ನೀರಿಗೆ ಈಗಾಗಲೇ ಚಾಲನೆ ದೊರೆತಿದೆ ಎಂದರು.
ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಮಹಾತ್ಮ ಗಾಂಧಿ ಕ್ರೀಡಾಂಗಣದ ಸುತ್ತಲೂ ತೆರೆದ ವಾಹನದಲ್ಲಿ ಶಾಸಕ ವೆಂಕಟೇಶ್, ತಹಶೀಲ್ದಾರ್ ವರದರಾಜು, ಪುರಸಭೆ ಅಧ್ಯಕ್ಷ ಸುದೇಶ್ ಬಾಬು
ಶಾಲಾ ಮಕ್ಕಳು ಸೇರಿದಂತೆ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಹೆಚ್ ವಿ ವೆಂಕಟೇಶ್, ತಹಶೀಲ್ದಾರ್ ವರದರಾಜು ಸೇರಿದಂತೆ ಇತರರು ಮಹಾತ್ಮಗಾಂಧೀಜಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷ ಸುದೇಶ್ ಬಾಬು, ಉಪಾಧ್ಯಕ್ಷರಾದ ಮಾಲಿನ್ ತಾಜ್ ಇ.ಓ ಉತ್ತಮ್, ಸಿ. ಡಿ.ಪಿ.ಓ ಸುನಿತಾ, ಪುರಸಭೆಯ ಮುಖ್ಯಾಧಿಕಾರಿ ಜಾಫರ್ ಷರೀಫ್ ಎಚ್. ವಿ ರವಿಕುಮಾರ್, ನರಸಿಂಹ ರೆಡ್ಡಿ ವೇಲು, ರಾಜೇಶ್, ಅಜಯ್ ಕುಮಾರ್, ಬಸವಲಿಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ, ಬಿ ಆರ್ ಸಿ ವೆಂಕಟೇಶ್, ಸಿ. ಐ ಸುರೇಶ್, ಪೂಜಾರಪ್ಪ ಮುಂತಾದವರು ಉಪಸ್ಥಿತರಿದ್ದರು.
ವರದಿ : ಶ್ರೀನಿವಾಸಲು ಎ
