IMG 20250904 WA0013

ಪಾವಗಡ : ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ…..!

DISTRICT NEWS ತುಮಕೂರು

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

ಪಾವಗಡ : ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಜ್ಯ ಶಿಕ್ಷಣ ಕಲ್ಯಾಣ ನಿಧಿಯಿಂದ ನೀಡಲಾಗುವ 2025 -26ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಒಬ್ಬ ಶಿಕ್ಷಕ, ಪ್ರೌಢಶಾಲಾ ವಿಭಾಗದಲ್ಲಿ ಮತ್ತೊಬ್ಬ ಶಿಕ್ಷಕ ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ :
ತಾಲ್ಲೂಕಿನ ಜಾಜುರಾಯನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಘವೇಂದ್ರ ಬಿ ಎನ್
ಪ್ರೌಢಶಾಲಾ ವಿಭಾಗದಲ್ಲಿ : ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಹನುಮೇಶ್ ಎನ್ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಬಂದರು

IMG 20250904 WA0014

ಸೆ. 5ರಂದು ಮಧುಗಿರಿ ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ತಲಾ 5,000 ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರೇಣುಕಮ್ಮ ತಿಳಿಸಿದ್ದಾರೆ.

ವರದಿ ಶ್ರೀನಿವಾಸಲು ಎ