IMG 20250909 WA00021

ಪಾವಗಡ : ಶಿಕ್ಷಕರ ದಿನಾಚರಣೆ….!

DISTRICT NEWS ತುಮಕೂರು

ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಸಕ ಎಚ್‌ ವಿ ವೆಂಕಟೇಶ್.

ಪಾವಗಡ : ವಿದ್ಯಾರ್ಥಿಗಳ ಜೀವನ ಮತ್ತು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಮೋಘವಾದುದೆಂದು ಶಾಸಕ ಎಚ್ ವಿ ವೆಂಕಟೇಶ್ ತಿಳಿಸಿದರು.

ಪಟ್ಟಣದ ಎಸ್ ಎಸ್ ಕೆ ರಂಗಮಂದಿರದಲ್ಲಿ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಪ್ರಯುಕ್ತ ತಾಲ್ಲೂಕು ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ವಿದ್ಯಾರ್ಥಿಗಳನ್ನು ಉತ್ತಮ ರೀತಿಯಲ್ಲಿ ತಿದ್ದಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಶಿಕ್ಷಣ ವ್ಯವಸ್ಥೆಯು ಬದಲಾವಣೆಗೆ ಒಳಪಟ್ಟಿದ್ದು ಹದಿನೈದು ವರ್ಷಗಳ ಹಿಂದಿನ ಶಿಕ್ಷಣಕ್ಕೂ ಈಗಿರುವ ಶಿಕ್ಷಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದರು.
ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ ಸಹ ತಮ್ಮ ಶಿಕ್ಷಕರನ್ನು ಮರೆಯಲು ಸಾಧ್ಯವಿಲ್ಲವೆಂದರು.
ಸರ್ವೆಪಲ್ಲಿ ರಾಧಾಕೃಷ್ಣರವರು ಮೊದಲು ಶಿಕ್ಷಕರಾಗಿ ನಂತರ ರಾಷ್ಟ್ರಪತಿ ಆದವರು ಎಂದರು.
ವಿದ್ಯಾರ್ಥಿಗಳ ಭವಿಷ್ಯ ಬದಲಾಯಿಸುವ ಶಕ್ತಿ ಶಿಕ್ಷಕರಿಗಿದ್ದು , ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಒತ್ತನ್ನು ನೀಡಬೇಕು ಎಂದರು.

ಪಾವಗಡ ತಾಲೂಕು ಸೋಲಾರ್ ಉತ್ಪಾದನೆಯಲ್ಲಿ ಏಷ್ಯಾದಲ್ಲಿಯೇ ಮೊದಲ ಸ್ಥಾನ ಗಳಿಸುವ ಕಾರ್ಯ ಶೀಘ್ರವೇ ಆಗುತ್ತದೆ ಎಂದರು.
2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಶೀಘ್ರ ಚಾಲನೆ ದೊರೆಯಲಿದ್ದು ಡಿಸೆಂಬರ್ ಅಂತ್ಯದೊಳಗೆ ಕಾರ್ಯಗತಗೊಳ್ಳುವುದೆಂದು ಸೋಲಾರ್ ಪಾರ್ಕ್ ಉದ್ಘಾಟನೆಗೆ ಇಂಧನ ಸಚಿವ ಜಾರ್ಜ್, ಡಿಕೆ ಶಿವಕುಮಾರ್,ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕರೆಸಿ ಅದ್ದೂರಿಯಾಗಿ ಕಾರ್ಯಕ್ರಮ ಮಾಡಲಾಗುವುದೆಂದರು.

ಪಾವಗಡ ತಾಲೂಕಿಗೆ ಬೈಪಾಸ್ ರಸ್ತೆಗಾಗಿ 160 ಕೋಟಿ ರೂಪಾಯಿ ಮಂಜೂರು ಆಗಿದೆ ಎಂದುಈ ಸಂಬಂಧ ಮಂತ್ರಿ ಸತೀಶ್ ಜಾರಕಿಹೊಳಿ ಬಳಿ ಮಾತನಾಡಿರುವುದಾಗಿ ತಿಳಿಸಿದರು
ನಾಗಲಮಡಿಕೆ ಶ್ರೀ ಅಂತ್ಯ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನಕ್ಕೆ 24 ಕೋಟಿ ರೂ ವೆಚ್ಚ ದಲ್ಲಿ ಡಿ.ಪಿ.ಆರ್ ಸಿದ್ದಗೊಳಿಸಿದ್ದು ಪಟ್ಟಣದಲ್ಲಿ ಕೊಳೇಗೆರಿಯ ನಿವಾಸಿಗಳಿಗೆ ವಸತಿ ಯೋಜನೆ ಅಡಿಯಲ್ಲಿ ಒಂದು ಸಾವಿರ ಮನೆಗಳು ಮಂಜೂರು ಮಾಡಲಾಗಿದೆ ಎಂದರು.

ಕಾರ್ಯಕ್ರಮ ಉದ್ದೇಶಿಸಿ ಮಾಜಿ ಶಾಸಕ ಕೆ ಎಂ ತಿಮ್ಮರಾಯಪ್ಪ ಮಾತನಾಡಿ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದ್ದು, ಶಿಕ್ಷಕರು ಇದರ ಬಗ್ಗೆ ಗಮನ ಹರಿಸಬೇಕು ಎಂದರು.
ಶಿಕ್ಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು.
ಶಿಕ್ಷಕರು ಶಾಲೆಗೆ ಬರುವ ಮಕ್ಕಳನ್ನು ತಮ್ಮ ಮಕ್ಕಳೆಂದು ಭಾವಿಸಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ರೇಣುಕಮ್ಮ, ನಿವೃತ್ತ ಶಿಕ್ಷಣಾಧಿಕಾರಿ ಇಂದ್ರಾಣಮ್ಮ, ಮಾಜಿ ಶಾಸಕರಾದ ಕೆ ಎಂ ತಿಮ್ಮರಾಯಪ್ಪ, ಪುರಸಭಾ ಅಧ್ಯಕ್ಷ ಸುದೇಶ್ ಬಾಬು, ರಾಜೇಶ್, ರವಿ,ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಿ ಕೆ ಉತ್ತಮ್, ಬಿ ಆರ್ ಸಿ ವೆಂಕಟೇಶ್, ರೈತ ಸಂಘದ ನರಸಿಂಹ ರೆಡ್ಡಿ, ಬಿ ಆರ್ ಪಿ ಗಳು ಸಿ.ಆರ್‌.ಪಿಗಳು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

ವರದಿ : ಶ್ರೀನಿವಾಸಲು ಎ