ಸಮಾಜದ ಎಲ್ಲಾ ಸಾರ್ವಜನಿಕರು ಸಂವಿಧಾನ ರಕ್ಷಣೆ ಮಾಡಲು ಬದ್ಧರಾಗಿರಬೇಕು
ಸಂವಿಧಾನ ಉಳಿದರೆ ನಮ್ಮ ರಕ್ಷಣೆಯಾಗುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮತಗಳ್ಳತನ ಮಾಡದಿರಲು ಸಾರ್ವಜನಿಕರಿಗೆ ಕರೆ
ಸಂವಿಧಾನ ಉಳಿದರೆ ನಮ್ಮ ರಕ್ಷಣೆಯಾಗುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮತಗಳ್ಳತನ ಮಾಡದಿರಲು ಸಾರ್ವಜನಿಕರಿಗೆ ಕರೆ
ಬೆಂಗಳೂರು, ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ನಮ್ಮ ಸಮಾಜದ ಎಲ್ಲಾ ಸಾರ್ವಜನಿಕರು ಸಂವಿಧಾನ ರಕ್ಷಣೆ ಮಾಡಲು ಬದ್ಧರಾಗಿರಬೇಕು. ಸಂವಿಧಾನ ಉಳಿದರೆ ನಮ್ಮ ರಕ್ಷಣೆಯಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕರ್ನಾಟಕ ಸರ್ಕಾರ ಮತ್ತು ಸಮಾಜಕಲ್ಯಾಣ ಇಲಾಖೆಯ ಸಮನ್ವಯದೊಂದಿಗೆ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ “ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಯಾವ ಸಮಾಜದಲ್ಲಿ ಭಿನ್ನಾಭಿಪ್ರಾಯಗಳನ್ನು ಕೇಳುವ ವ್ಯವಸ್ಥೆ ಇದೆಯೊ ಅಲ್ಲಿ ಪ್ರಜಾಪ್ರಭುತ್ವ ಬೆಳೆದಿದೆ ಎಂದರು.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಾದ ಇಂದು “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಪಟ್ಟಭಧ್ರಾ ಹಿತಾಶಕ್ತಿಗಳಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುವ ಪಿತೂರಿ ನಡೆಯುತ್ತಿದೆ. ಇದನ್ನು ಅರಿತಿರುವ ಸರ್ಕಾರ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ಪೀಠಿಕೆಯಲ್ಲಿ ಎಲ್ಲಾ ಸಾರಾಂಶ ಅಡಕವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ದಿನಗಳಿಂದಲೇ ಸಂವಿಧಾನದ ಮಹತ್ವದ ಅರಿವು ಉಂಟಾಗುತ್ತದೆ. ಸಂವಿಧಾನವನ್ನು ಅನೇಕರು ತಿಳಿದುಕೊಂಡಿಲ್ಲ. ಸಂವಿಧಾನವನ್ನು ತಿಳಿದುಕೊಂಡರೆ ಯಾರನ್ನೂ ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದರು.
ಚುನಾವಣೆಯಲ್ಲಿ ಮತಗಳ್ಳತನ ಶುರುವಾಗಿದೆ. ಮತ ಕಳ್ಳತನವಾಗಲು ಬಿಡಬಾರದು. ಸಂವಿಧಾನವನ್ನು ದುರ್ಬವಾಗಲು ಬಿಡಬಾರದು. ಎಚ್ಚರಿಕೆಯಿಂದ ಇದ್ದರೆ ನಮ್ಮ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲಾ ಜಾತಿ, ಧರ್ಮ, ಮಹಿಳೆಯರನ್ನು ಗೌರವದಿಂದ ಕಾಣುವ ವ್ಯವಸ್ಥೆ ಪ್ರಜಾಪ್ರಭುತ್ವದಲ್ಲಿದೆ. ಅಸಮಾನತೆ ನಿವಾರಣೆಯಾದರೆ, ಶೋಷಣೆ ಮಾಡಲು ಸಾಧ್ಯವಿಲ್ಲ. ಜಾತಿ-ಧರ್ಮ ಬೇಧ ಮಾಡದೆ ಸಹಿಷ್ಣುತೆ ಬೆಳೆಸಿಕೊಳ್ಳಿ ಎಂದು ಸಂವಿಧಾನ ಹೇಳಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರನ್ನು ತಪ್ಪು ದಾರಿಗೆ ಎಳೆಯಬಾರದು. ಪ್ರತಿಯೊಬ್ಬರು ಆಥಿರ್üಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು ಎಂದರು.

ನಮ್ಮ ರಾಜ್ಯದಲ್ಲಿ ಅಸಮಾನತೆ ಹೋಗಲಾಡಿಸಲು ಅನೇಕ ಭಾಗ್ಯ ಮತ್ತು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ಇದುವರೆಗೆ ಸುಮಾರು 98 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರಜಾಪ್ರಭುತ್ವದಲ್ಲಿ “ನನ್ನ ಮತ ನನ್ನ ಹಕ್ಕು” ಕುರಿತ ಚಿತ್ರಕಲಾ ಸ್ಪರ್ಧೆ, ಛಾಯಾಚಿತ್ರ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಗೆ ಚಾಲನೆ ನೀಡಿದರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಉದ್ಯಮವನ್ನು ಸ್ಥಾಪಿಸಲು 23 ಫಲಾನುಭವಿಗಳಿಗೆ ತಲಾ 5 ಲಕ್ಷ ರೂ.ಗಳ ಸಹಾಯಧನ ನೀಡಿದರು. 2025ನೇ ಸಾಲಿನಲ್ಲಿ ವೈದ್ಯಕೀಯ ಐಐಟಿ, ಐಐಐಟಿ, ಎನ್‍ಐಟಿ ಮತ್ತು ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳಿಗೆÀ ಉತ್ತಮ ಅಂಕ ಪಡೆದು ಆಯ್ಕೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿದರು.