IMG 20250922 WA0042

Karnataka : ನಾಡ ಹಬ್ಬ ದಸರಾ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ…..!

Genaral STATE

ನಾಡ ಹಬ್ಬ ದಸರಾ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ

ನಮ್ಮ ಸಂವಿಧಾನ ಜಾತ್ಯತೀತ, ಧರ್ಮಾತೀತ: ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು/ಬೆಂಗಳೂರು, ಸೆಪ್ಟೆಂಬರ್ 22 (ಕರ್ನಾಟಕ ವಾರ್ತೆ):

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಸವಾಲು ಎಸೆದರು.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಸರಾ ಮತ್ತು ನಮ್ಮ ಸಾಂಸ್ಕøತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು.  ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ.  ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ  ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು  ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.
ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ.  ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.IMG 20250922 WA0031

ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ವಿರೋಧ ಪಕ್ಷದವರು ಗ್ಯಾರಂಟಿ ಫಲಾನುಭವಿಗಳಲ್ಲವೇ: ಸಿ.ಎಂ ಪ್ರಶ್ನೆ

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ವಿರೋಧ ಪಕ್ಷದವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ  ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ ಜಿಡಿಪಿಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ವಿರೋಧ ಪಕ್ಷದವರು ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.

ನಾಡಹಬ್ಬ ದಸರಾ-ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ: ಸಾಹಿತಿ ಬಾನು ಮುಷ್ತಾಕ್

IMG 20250922 WA0033ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕøತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.

ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ.  ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕøತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕøತಿ

ಮೈಸೂರು ಅರಸರ ಸಂಸ್ಕøತಿಯ ಪರಂಪರೆಯಿಂದ ಹಿಡಿದು, ಕನ್ನಡ ಭಾμÉಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕøತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕøತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ  ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ  ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕøತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.