image001ROEA

Delhi ಸ್ಫೋಟ : 8 ಜನರ ಸಾವು , ರಾಜ್ಯದಾದ್ಯಂತ ಅಲರ್ಟ್…!

CRIME National - ಕನ್ನಡ STATE

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ  i 20 ಕಾರು ಸ್ಫೋಟಗೊಂಡು 8 ಜನ ರು ಮೃತಪಟ್ಟಿದ್ದು,  ಹಲವಾರು ಜನರು ಗಾಯಗೊಂಡಿದ್ದಾರೆ.  ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ದೆಹಲಿಯ ಕೆಂಪ ಕೋಟೆ ಬಳಿಯ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗೃಹ ಸಚಿವರು ದೆಹಲಿ ಪೊಲೀಸ್ ಆಯುಕ್ತರು ಮತ್ತು ಸ್ಥಳದಲ್ಲಿದ್ದ ಇತರ ಹಿರಿಯ ಅಧಿಕಾರಿಗಳಿಂದ ಪರಿಸ್ಥಿತಿಯ ವಿವರಗಳನ್ನು ಪಡೆದರು

ಪ್ರಕರಣದ ಸಂಪೂರ್ಣ ತನಿಖೆಯನ್ನು ಎಲ್ಲಾ ಕೋನಗಳಿಂದಲೂ ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ದೆಹಲಿ ಪೊಲೀಸ್ ವಿಶೇಷ ಘಟಕ, ಅಪರಾಧ ವಿಭಾಗ, NIA, NSG ಮತ್ತು FSL ತಂಡಗಳು ಸ್ಥಳಕ್ಕೆ ತಲುಪಿವೆ ಮತ್ತು ನಮ್ಮ ಸಂಸ್ಥೆಗಳು ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

image0028SFA

ಕೇಂದ್ರ ಗೃಹ ಸಚಿವರು ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದರು. ಅವರು ವೈದ್ಯರೊಂದಿಗೆ ಮಾತನಾಡಿದರು ಮತ್ತು ಗಾಯಾಳುಗಳ ಆರೋಗ್ಯದ ಬಗ್ಗೆ ವಿಚಾರಿಸಿದರು.

ಪ್ರಧಾನಿ ನರೇಂದ್ರ ಮೋದಿ  ಸಂತಾಪ ;

ಸ್ಫೋಟದ ಸುದ್ದಿ ತಿಳಿದ ತಕ್ಷಣ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು ಎಂದು ಗೃಹ ಸಚಿವರು ಹೇಳಿದರು. ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಮತ್ತು ಘಟನಾ ಸ್ಥಳದಿಂದ ಸಂಗ್ರಹಿಸಿದ ಪುರಾವೆಗಳನ್ನು ವಿಶ್ಲೇಷಿಸುವವರೆಗೆ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಅವರು ಹೇಳಿದರು.

*ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ*

image3

ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದೆಹಲಿ ಸ್ಪೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿ ಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.image5

*ಮೃತರ ಕುಟುಂಬದ ವರ್ಗದವರಿಗೆ ಸಂತಾಪ*
ಸ್ಪೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಪೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.