ಮಕ್ಕಳ ದೈಹಿಕ, ಮಾನಸಿಕ ಬೆಳವಣಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವವಾದುದು. ಹಿರಿಯ ಸಿವಿಲ್ ನ್ಯಾಯಾಧೀಶ ವಿ ಮಾದೇಶ್.
ಪಾವಗಡ: ಅಂಗನವಾಡಿ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಅಪೌಷ್ಟಿಕತೆ ಮತ್ತು ಶಿಕ್ಷಣದ ಕೊರತೆಯಂತಹ ಸಮಸ್ಯೆಗಳನ್ನು ನಿಭಾಯಿಸಲು ಸರ್ಕಾರದ ಪ್ರಯತ್ನಗಳಲ್ಲಿ
ಮುಂಚೂಣಿಯಲ್ಲಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ ಮಾದೇಶ್ ತಿಳಿಸಿದ್ದಾರೆ.
ಪಟ್ಟಣದ ಆದರ್ಶನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ದಲ್ಲಿ ಶುಕ್ರವಾರ ತಾಲ್ಲೂಕು ಕಾನೂನು ಸೇವಾ ಸಮಿತಿ,
ವಕೀಲರ ಸಂಘ ಮತ್ತು, ಶಿಶು ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಮತ್ತು ನ್ಯಾಯದ ಜಾಗೃತಿ ಅಭಿಯಾನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಆರೋಗ್ಯ ಮತ್ತು, ಪೌಷ್ಟಿಕ ಸಮಸ್ಯೆಯಿಂದ ಬಳಲುತ್ತಿರುವ ಗರ್ಭಿಣಿ ಸ್ತ್ರೀಯರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವುದರಲಿ ಅಂಗನವಾಡಿ ಕಾರ್ಯಕರ್ತೆಯ ಪಾತ್ರ ಪ್ರಮುಖವಾದದ್ದು ಎಂದರು.
ಅಂಗನವಾಡಿ ಕಾರ್ಯಕರ್ತರು ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಯಾವುದೇ ತೊಂದರೆಗೊಳಗಾದ ಮಹಿಳೆಯರಿಗೆ ಕಾನೂನು ಸೇವೆಗಳ ಬಗ್ಗೆ ಮಾಹಿತಿ ನೀಡುವುದು, ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಮಾರಾಟ, ಮಕ್ಕಳ ಅಕ್ರಮ ಬಂಧನ, ಅನಾಥ ಮಕ್ಕಳ ಸಮಸ್ಯೆ, ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಕಾರ್ಯಕ್ರಮ ಉದ್ದೇಶಿಸಿ ಸಿ ಡಿ ಪಿ ಓ ಸುನಿತಾ ಡಿ.ಜೆ ಮಾತನಾಡಿ.
ಶಿಕ್ಷಣದ ಜೊತೆಗೆ ಮಕ್ಕಳ ಬೆಳವಣಿಗೆಗೆ ಅಗತ್ಯವಾದ ಪೋಷಕಾಂಶಗಳನ್ನು ನೀಡುವ ಕಾರ್ಯವನ್ನು ಅಂಗನವಾಡಿ ಸಕ್ರಮವಾಗಿ ನಿರ್ವಹಿಸುತ್ತದೆ ಎಂದರು.
ಅಂಗನವಾಡಿಗಳು ಮೊದಲು ಮೊದಲು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು.
1975 ರಲ್ಲಿ ಅಕ್ಟೋಬರ್ 2 ರಂದು ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ ಅಭಿವೃದ್ಧಿ ಗಾಗಿ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆಯನ್ನು ಪ್ರಾರಂಭಿಸಲಾಯಿತು ಎಂದು.
0-6 ವರ್ಷದೊಳಗಿನ ಮಕ್ಕಳ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಭದ್ರ ಬುನಾದಿ ಹಾಕುವುದು, ಗರ್ಭಿಣಿ, ಬಾಣಂತಿ ಮತ್ತು ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆಯನ್ನು ಸುಧಾರಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವೆಂದರು.
ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ತಡೆಗಟ್ಟಲು ಮತ್ತು ಸುಧಾರಿಸಲು ಪೂರಕ ಪೌಷ್ಠಿಕ ಆಹಾರ, ಆರೋಗ್ಯ ತಪಾಸಣೆ ಮತ್ತು ಲಸಿಕೆಗಳಂತಹ ಸೇವೆಗಳನ್ನು ಒದಗಿಸುವಲ್ಲಿ ಅಂಗನವಾಡಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಹನುಮಂತ ರಾಯಪ್ಪ, ಸರ್ಕಾರಿ ಅಭಿಯೋಜಕರಾದ ಸಣ್ಣೀರಪ್ಪ, ರಮೇಶ್ ಬಾಬು, ಪ್ಯಾನಲ್ ವಕೀಲರಾದ ಸರೋಜಮ್ಮ, ಮೇಲ್ವಿಚಾರಕಿಯರಾದ ಮಮತಾ,ಭಾಗ್ಯಲಕ್ಷ್ಮಿ ಜಯಲಕ್ಷ್ಮಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.
ವರದಿ : ಶ್ರೀನಿವಾಸಲು. ಎ ಪಾವಗಡ
