IMG 20251129 WA0011 scaled

congress : ಹೈಕಮ್ಯಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಸಿದ್ದು – ಡಿಕೆಶಿ…..!

National - ಕನ್ನಡ POLATICAL STATE

ಬೆಂಗಳೂರು :‌ ಹೈಕಮಾಂಡ್‌  ಅಣತಿಯಂತೆ ಇಂದು ಬೆಳ್ಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ. ಕೆ ಶಿವಕುಮಾರ್‌ ಅವರು ಇಂದು ಬ್ರೇಕ್‌ ಪಾಸ್ಟ್‌ ಮೀಟಿಂಗ್‌ ನ್ನು ಮಾಡಿದರು,

ಬ್ರೇಕ್‌ ಪಾಸ್ಟ್‌ ಮೀಟಿಂಗ್‌ ನಂತರ ಸಿದ್ದರಾಮಯ್ಯ – ಡಿಕೆಶಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.  ಕಾಂಗ್ರೆಸ್‌ ಪಕ್ಷದ ವರಿಷ್ಟರು ನೀಡುವ ಮಾರ್ಗದರ್ಶನ ದಂತೆ ನಾವು ಇಬ್ಬರು ನಾಯಕರು ನಡೆದು ಕೊಳ್ಳುವುದಾಗಿ ಜಂಟಿ  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು,IMG 20251129 WA0012

ರಾಜ್ಯದಲ್ಲಿ ಕೆಲವು ದಿನಗಳಿಂದ ಅಧಿಕಾರ ಹಸ್ತಾಂತರ ವಿಷಯದಲ್ಲಿ ಚರ್ಚೆಗಳು, ಬಣ ರಾಜಕೀಯ ಜೋರಾಗಿತ್ತು ಕೆಲ ಶಾಸಕರ ದೆಹಲಿ ಯಾತ್ರೆ ಜೋರಾಗಿತ್ತು. ಇದರಿಂದ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯದಲ್ಲಿ ಡ್ಯಾಮೇಜ್‌ ಹಾಗುತ್ತಿರುವುದನ್ನು ಮನಕಂಡ ಹೈಕಮ್ಯಾಂಡ್‌  ಸಿದ್ದರಾಮಯ್ಯ ಮತ್ತು ಡಿಕೆಶಿ ಗೆ ಬ್ರೇಕ್‌ ಪಾಸ್ಟ್‌ ಮೀಟಿಂಗ್‌  ಮಾಡಿ ಗೊಂದಲಗಳಿಗೆ ತೆರೆ ಎಳೆಯುವಂತೆ ಕಾಂಗ್ರಸ್‌ ಹಿರಿಯ ನಾಯಕ ವೇಣುಗೋಪಾಲ್‌ ನಿನ್ನೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಬಿನ್ನಾಭಿಪ್ರಾಯ, ಪವರ್‌ ಶೇರಿಂಗ್ ಗೊಂದಲ, ನಾಯಕತ್ವ ಹಸ್ತಾಂತರ ವಿಚಾರಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದವು.

Press meet – Video

ನಾಳೆಯಿಂದ ಯಾವುದೇ ಗೊಂದಲಗಳು ಇರುವುದಿಲ್ಲ. ಈ ಗೊಂದಲಗಳು ಮಾದ್ಯಮಗಳ ಸೃಷ್ಠಿ ಎಂದು ತಿಳಿಸಿದರು.ಹೈಕಾಮಂಡ್‌ ಯಾವ ರೀತಿ ನಿರ್ದೇಶನ ನೀಡುತ್ತದೆ ಅದರಂತೆ ನಾನು ಡಿಕೆಶಿ ನಡೆದು ಕೊಳ್ಳುತ್ತೇವೆ  ಎನ್ನುವ ಮೂಲಕ ಇಬ್ಬರೂ ನಾಯಕರು ಸ್ಪಷ್ಟ ಸಂದೇಶ ನೀಡಿದ್ದಾರೆ. “ನನ್ನ ಮತ್ತು ಡಿಕೆ ಶಿವಕುಮಾರರ ನಡುವೆ ಯಾವುದೇ ಬಿನ್ನಾಭಿಪ್ರಾಯವೇ ಇಲ್ಲ. ನಾಳೆಯಿಂದ ಯಾವುದೇ ಗೊಂದಲ ಇರೋದಿಲ್ಲ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿರುವುದು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಎಂ ಜಂಟಿ ಪತ್ರಿಕಾಗೋಷ್ಠಿ*

*ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ*

*ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ* : *ಸಿಎಂ ಸಿದ್ದರಾಮಯ್ಯ*
ಬೆಂಗಳೂರು, ನವೆಂಬರ್ 29:
ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

 

IMG 20251129 WA0007

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು. ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

*2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ*

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028 ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022 ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

*ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ*

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ, ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

*ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ*

ಇತ್ತೀಚೆಗೆ ಅಧಿಕಾರ ಹಸ್ತಾತ್ಮ್ಯರದ ಬಗ್ಗೆ ಉಂಟಾಗಿರುವ ಗೊಂದಲಗಳಿಗೆ ಮಾಧ್ಯಮಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ ವಿರೋಧ ಪಕ್ಷಗಳು ಏನೇ ಸುಳ್ಳು ಆರೋಪಗಳನ್ನು ಮಾಡಿದರೂ ಅವನ್ನೆಲ್ಲಾ ಸಮರ್ಥವಾಗಿ ಎದುರಿಸುವ ಕೆಲಸ ಮಾಡುತ್ತೇವೆ ಎಂದರು.

 

.