ಪರಿಶುದ್ಧ ಮತ್ತು ಸುರಕ್ಷಿತವಾದ ಆಹಾರ ಸೇವನೆ ಪ್ರತಿಯೊಬ್ಬ ನಾಗರಿಕನ ಹಕ್ಕು. ಗ್ರೇಡ್ 2 ತಹಶೀಲ್ದಾರ್ ಪ್ರಸಾದ್.
ಪಾವಗಡ: ಪರಿಶುದ್ಧ ಮತ್ತು ಸುರಕ್ಷಿತವಾದ ಆಹಾರ ಸೇವನೆ ಪ್ರತಿಯೊಬ್ಬ ಮನುಷ್ಯನ ಹಕ್ಕು. ಆಹಾರ ಪದಾರ್ಥಗಳ ಮಾರಾಟಗಾರರು ಗ್ರಾಹಕರ ನಂಬಿಕೆ ಉಳಿಸಿಕೊಳ್ಳಬೇಕು ಎಂದು ಗ್ರೇಡ್ 2 ತಹಶೀಲ್ದಾರ್ ಪ್ರಸಾದ್ ತಿಳಿಸಿದರು.
ತಾಲೂಕಿನ ನಿಡಗಲ್ ಹೋಬಳಿಯ ವಿ.ಎಚ್ ಪಾಳ್ಯದ ಸಮುದಾಯ ಭವನದಲ್ಲಿ ಬುಧವಾರ ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಆಹಾರ ಅದಾಲತ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಆಹಾರ ಅದಾಲತ್ ನಲ್ಲಿ ಗ್ರಾಹಕ, ಅಧಿಕಾರಿಗಳು, ಮಾರಾಟಗಾರರು ಒಂದೇ ವೇದಿಕೆಯಲ್ಲಿದ್ದು ಮೂವ್ವರಲ್ಲಿ ಏನಾದರೂ ಕುಂದು ಕೊರತೆಗಳು ಇದ್ದರೆ ನ್ಯಾಯಯುತವಾಗಿ ಬಗೆಹರಿಸಿಕೊಳ್ಳಲು ಆಹಾರ ಅದಾಲತ್ ಒಂದು ವೇದಿಕೆಯಾಗಿದೆ ಎಂದರು. .
ಗ್ರಾಹಕರು ಆಹಾರ ಸಂಸ್ಕರಣಾ ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು ಮತ್ತು ಕಲಬೆರಿಕೆ ಆಹಾರಗಳ ಬಗ್ಗೆ ಜಾಗೃತರಾಗಬೇಕು ಎಂದರು.
ಇತ್ತೀಚೆಗೆ ಕಲಬೆರಿಕೆ ಹೆಚ್ಚಾಗುತ್ತಿದ್ದು ಅದನ್ನು ತಡೆಯುವ ನಿಟ್ಟಿನಲ್ಲಿ ಆಹಾರ ಅದಾಲತ್ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಆಹಾರ ಇಲಾಖೆಯ ಶಿರಸ್ತೆದಾರ್ ಶಶಿಕಲಾ ಮಾತನಾಡಿ.
ಪಡಿತರ ಚೀಟಿಗಳ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಹೋಬಳಿ ಮಟ್ಟದಲ್ಲಿ ಆಹಾರ ಅದಾಲತ್ ಸಭೆಯನ್ನು ಏರ್ಪಡಿಸಲಾಗಿದೆ ಎಂದರು.
ಸಾರ್ವಜನಿಕರು ಪಡಿತರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಇದೊಂದು ವಿನೂತನ ಕಾರ್ಯಕ್ರಮವಾಗಿದೆ ಎಂದರು.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ 75 ವರ್ಷದ ಮೇಲ್ಪಟ್ಟ ಏಕ ಸದಸ್ಯರಿರುವ ವಯೋವೃದ್ಧರಿಗೆ ಅವರ ಮನೆ ಬಾಗಿಲಿಗೆ ಪಡಿತರ ವಿತರಿಸಲು ‘ಅನ್ನ ಸುವಿಧ’ ಯೋಜನೆ ಜಾರಿಗೆ ಬಂದಿದೆ ಎಂದು.
ಅರ್ಹ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡರೆ ಅಂತಹವರ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತದೆ ಎಂದು ತಿಳಿಸಿದರು.
ಪಾವಗಡದಲ್ಲಿ ಹೊಸ ಪಡಿತರ ಚೀಟಿಗೆ 3613 ಅರ್ಜಿ ಸ್ವಿಕೃತಗೊಂಡಿದ್ದು 2734ಅರ್ಜಿ ವಿಲೇವಾರಿ , 879 ಅರ್ಜಿ ಬಾಕಿ ಇದ್ದು.ಅರ್ಹ ಪಡಿತರ ಚೀಟಿದಾರರಿಗೆ ಪಡಿತರ ಚೀಟಿ ವಿತರಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಆಹಾರ ನಿರೀಕ್ಷಕ ರಘು, ಗ್ರಾಮ ಪಂಚಾಯತಿ ಅಧ್ಯಕ್ಷ ದಯಾನಂದ್, ವಿಎಸ್ಎಸ್ಎನ್ ಅಧ್ಯಕ್ಷರು, ಸದಸ್ಯರು ಮತ್ತು ಸಾರ್ವಜನಿಕರು ಹಾಜರಿದ್ದರು.
