IMG 20260107 WA0075

ಪಾವಗಡ : ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ….!

DISTRICT NEWS ತುಮಕೂರು

ಬಡವರ ಪಾಲಿನ ಆಶಾಕಿರಣ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಾಜಿ ಸಚಿವ ವೆಂಕಟರಮಣಪ್ಪ.

ಪಾವಗಡ: ದೀರ್ಘಾವಧಿಯ ಕಾಲ ರಾಜ್ಯದ ಚುಕ್ಕಾಣಿ ಹಿಡಿಯುವ ಮೂಲಕ ಮಾಜಿ ಮುಖ್ಯಮಂತ್ರಿ ದೇವರಾಜು ಅರಸ್ ರವರ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ
ಬ್ಲಾಕ್ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಡವ, ಹಿಂದುಳಿದ ವರ್ಗದವರ, ದೀನದಲಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ವ್ಯಕ್ತಿ ಸಿದ್ದರಾಮಯ್ಯಎಂದು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಚುಕ್ಕಾಣಿ ಹಿಡಿದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ಬಡವರ ಏಳಿಗೆಗಾಗಿ ಶ್ರಮಿಸಿದ್ದಾರೆ ಎಂದರು.

ಪಾವಗಡ ತಾಲೂಕಿಗೆ ಸಿದ್ದರಾಮಯ್ಯನವರ ಕೊಡುಗೆ ಅಪಾರವಾಗಿದ್ದು, ಸೋಲಾರ್, ತುಂಗಭದ್ರಾ ನೀರಿನ ಯೋಜನೆ ಸೇರಿದಂತೆ ಹಲವು ಮಹತ್ತರವಾದ ಯೋಜನೆಗಳನ್ನು ಜಾರಿಗೆತಂದು ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ ಎಂದು.

ಪಟ್ಟಣದ ಶನಿಮಹಾತ್ಮ ಸರ್ಕಲ್ ನ ಬಳಿ ಕಾಂಗ್ರೆಸ್ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ಅನೇಕ ಮುಖಂಡರು ಮತ್ತು ಅಪಾರ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದ ಬಳಿಕ ಡಾ.ಬಿ ಆರ್ ಅಂಬೇಡ್ಕರ್ ಮತ್ತು ಕನಕದಾಸ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪುರಸಭಾ ಅಧ್ಯಕ್ಷ ಸುದೇಶ್ ಬಾಬು, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಾಂಜಿನಪ್ಪ, ಮಹಿಳಾ ಅಧ್ಯಕ್ಷೆ ಸುಮಾ ಅನಿಲ್,ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಶೇಷಗಿರಿ, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮೈಲಾರಪ್ಪ, ಶಿವ ಸಾಯಿ ಮೋಟರ್ಸ್ ರಾಜಪ್ಪ,
ಗುತ್ತಿಗೆದಾರರಾದ ಆರ್ ಎ ಹನುಮಂತರಾಯಪ್ಪ, ಈರಾರೆಡ್ಡಿ,ತಾ.ಪಂ ಮಾಜಿ ಅಧ್ಯಕ್ಷರಾದ ಆದಿ ನಾರಾಯಣಪ್ಪ, ಮಾಜಿ ಉಪಾಧ್ಯಕ್ಷರಾದ ಐ ಜಿ ನಾಗರಾಜ್, ವೇಲುರಾಜು,  ಗುಮ್ಮಘಟ್ಟ ಶ್ರೀನಿವಾಸುಲು,ರಾಮಚಂದ್ರರೆಡ್ಡಿ, ಬಳಸಮುದ್ರ ಗೋವಿಂದಪ್ಪ,ನಿವೃತ್ತ ಶಿಕ್ಷಕ ನಾರಾಯಣಪ್ಪ, ಗುಟ್ಟಹಳ್ಳಿ ಅಂಜಿನಪ್ಪ, ನಂಜುಂಡ ಸ್ವಾಮಿ, ವಿಜಯ್ ಕುಮಾರ್, ಈಶ್ವರ್, ಕಡಮಲಕುಂಟೆ ನಾಗಭೂಷಣ್ ಮುಂತಾದವರು ಹಾಜರಿದ್ದರು.

ವರದಿ : ಶ್ರೀನಿವಾಸಲು ಎ

 

Leave a Reply

Your email address will not be published. Required fields are marked *