- ಕರ್ನಾಟಕ ಕ್ರೀಡಾಕೂಟಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ…..!
- ಜಿಲ್ಲೆಯಲ್ಲಿ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು(ಕ.ವಾ)ಜ.16: ತುಮಕೂರಿನಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ಹಿರಿಯ ಒಲಿಂಪಿಕ್ಸ್ ಎಂದು ಕರೆಯಲಾಗುವ ಕರ್ನಾಟಕ ಕ್ರೀಡಾಕೂಟ 2025-26ಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ ನೀಡಲಾಯಿತು.
ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಹಾಗೂ ಈಜು ಕೊಳ ನಿರ್ಮಾಣ ಸೇರಿದಂತೆ ಕ್ರೀಡಾ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಶುಕ್ರವಾರ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಮ್ಮ ಭಾಷಣದಲ್ಲಿ ತುಮಕೂರಿನಲ್ಲಿ ವಿವಿಧ ಕ್ರೀಡಾಂಗಣಗಳಿದ್ದು, ಅಂತಾರಾಷ್ಟ್ರೀಯ ಮಟ್ಟದ ಈಜು ಕೊಳ ಹಾಗೂ ಹಾಕಿ ಕ್ರೀಡಾಂಗಣಗಳ ಅವಶ್ಯವಿದ್ದು, ಮಾನ್ಯ ಮುಖ್ಯಮಂತ್ರಿಗಳು 25 ಕೋಟಿ ರೂ.ಗಳ ಅನುದಾನ ನೀಡುವಂತೆ ಕೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವರ್ಷ ಉಡುಪಿ ಮತ್ತು ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟ ನಡೆದ ಸಂದರ್ಭದಲ್ಲಿ 6 ಕೋಟಿ ರೂ.ಗಳ ಅನುದಾನವನ್ನು ಘೋಷಿಸಲಾಗಿತ್ತು. ಅದರಂತೆ ತುಮಕೂರಿಗೂ ಕ್ರೀಡಾಭಿವೃದ್ಧಿಗಾಗಿ 6 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದರು.
ವಿದ್ಯಾರ್ಥಿ ಜೀವನದಲ್ಲಿ ಓದಿನ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿಂದ ಸಮಯ ಪ್ರಜ್ಞೆ, ಶಿಸ್ತು, ಸಮಯ ಪಾಲನೆ ಹಾಗೂ ತಂಡಭಾವನೆ ಬೆಳೆದರೆ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದ ಅವರು, ಯುವಕರು ಮಾದಕ ವ್ಯಸನಗಳಿಗೆ ತುತ್ತಾಗದೆ, ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೂ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ನಾನು ಕೂಡ ಕ್ರೀಡಾಪಟುವಾಗಿದ್ದು, ಕ್ರೀಡಾಭಿಮಾನಿಯಾಗಿದ್ದೇನೆ. ನನ್ನ ಶಾಲಾ ದಿನಗಳಲ್ಲಿ ಅಂತರ್ ಶಾಲಾ ಮಟ್ಟದ ಕಬ್ಬಡಿ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ. ಎμÉ್ಟೀ ಕೆಲಸದ ಒತ್ತಡ ಇದ್ದರೂ ಕ್ರಿಕೆಟ್ ಹಾಗೂ ಫುಟ್ಬಾಲ್ ಕ್ರೀಡೆಗಳನ್ನು ನೋಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರತಿಯೊಬ್ಬ ಕ್ರೀಡಾಪಟು ಗುರಿ ಹಾಗೂ ಪರಿಶ್ರಮದೊಂದಿಗೆ ನಿರಂತರ ತರಬೇತಿ ಪಡೆದರೆ ಏμÁ್ಯ ಮಟ್ಟದ ಸ್ಪರ್ಧೆಗಳವರೆಗೆ ತಲುಪಲು ಸಾಧ್ಯವಾಗುತ್ತದೆ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತ್ಯಂತ ಮಹತ್ವದ್ದಾಗಿದ್ದು, ಕ್ರೀಡೆಗೆ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂಬ ಬೇಸರ ಬೇಡ ಎಂದು ಅವರು ಸ್ಪಷ್ಟಪಡಿಸಿ, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ ಹಾಗೂ ಎಲ್ಲಾ ಇಲಾಖೆಗಳ ಉದ್ಯೋಗ ನೇಮಕಾತಿಯಲ್ಲೂ ಶೇ.2ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ ಎಂದರು.
ಅಲ್ಲದೆ, ವಿಶ್ವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂ., ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆದವರಿಗೆ 3 ಕೋಟಿ ರೂ. ಬಹುಮಾನ ನೀಡಲಾಗುತ್ತಿದೆ. ಇಷ್ಟು ಪ್ರೋತ್ಸಾಹವನ್ನು ಬೇರೆ ಯಾವುದೇ ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ನೀಡುವುದಿಲ್ಲ ಎಂದು ಅವರು ತಿಳಿಸಿದರು.
ಡಾ: ಜಿ.ಪರಮೇಶ್ವರ :
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು, ಒಲಂಪಿಕ್ ಕ್ರೀಡಾಕೂಟವನ್ನು ನಶೆಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಯುವಜನತೆಗೆ ಮೀಸಲಾಗಿ ಆಯೋಜಿಸಲಾಗಿದ್ದು, ಯುವಕರು ಮಾದಕ ವ್ಯಸನಗಳಿಂದ ದೂರವಿದ್ದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶ ಹೊಂದಿದೆ ಎಂದು ಹೇಳಿದರು.
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ನಮ್ಮ ರಾಜ್ಯದಿಂದ ಏμÁ್ಯ ಮಟ್ಟದ ಕ್ರೀಡಾಕೂಟಗಳಿಗೆ ಕನಿಷ್ಠ 500 ಕ್ರೀಡಾಪಟುಗಳು ಭಾಗವಹಿಸಬೇಕೆಂಬ ಗುರಿಯಿದೆ ಎಂದು ಹೇಳಿದರು.
ಎಲ್ಲಾ ಆಟಗಳಲ್ಲಿ ಗೆಲ್ಲುವುದು ಮುಖ್ಯವಲ್ಲ, ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುವುದೇ ಮುಖ್ಯ ಎಂದು ಅಭಿಪ್ರಾಯಪಟ್ಟ ಅವರು, ಕ್ರೀಡೆ ವಿದ್ಯಾಭ್ಯಾಸದ ಜೊತೆಗೆ ಯುವಕರ ಜೀವನ ರೂಪಿಸುವ ಶಕ್ತಿಯಾಗಿದೆ ಎಂದರು
ಕರ್ನಾಟಕ ಕ್ರೀಡಾಕೂಟಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ :
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಲಾಗುತ್ತಿರುವ ರಾಜ್ಯ ಮಟ್ಟದ ಈ ಕ್ರೀಡಾಕೂಟಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾರಂಭದ ಘೋಷಣೆ ಮಾಡುವ ಮೂಲಕ ಚಾಲನೆ ನೀಡಿದರು.
ಕಳೆದ 1 ತಿಂಗಳಿನಿಂದ ಕರ್ನಾಟಕ ಕ್ರೀಡಾಕೂಟದ ಸಿದ್ಧತೆಗಳನ್ನು ನಡೆಸಿದ್ದ ತುಮಕೂರು ಜಿಲ್ಲಾಡಳಿತ 1 ವಾರಗಳ ಕಾಲ ನಡೆಯುವ ಕ್ರೀಡಾಕೂಟಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಿತು. ಸುಮಾರು 27 ಕ್ರೀಡೆಗಳು ಈ ಕ್ರೀಡಾಕೂಟದಲ್ಲಿ ನಡೆಯುತ್ತಿದ್ದು, 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ವಿಶೇಷ.
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣ, ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನ ಸೇರಿದಂತೆ ವಿವಿಧ ಕ್ರೀಡೆಗಳಿಗಾಗಿ ನಗರದ ವಿವಿಧ ಅಂಕಣಗಳನ್ನು ಸಜ್ಜುಗೊಳಿಸಲಾಗಿದ್ದು, ಶುಕ್ರವಾರದಿಂದಲೇ ಫುಟ್‍ಬಾಲ್, ಟೇಕ್ವಾಂಡೋ, ಕತ್ತಿವರಸೆ ಸೇರಿದಂತೆ ವಿವಿಧ ಕ್ರೀಡೆಗಳ ಮೂಲಕ ಕ್ರೀಡಾಕೂಟ ಆರಂಭವಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳ ಸ್ವಾಗತಕ್ಕೆ ತುಮಕೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡು ಗಮನ ಸೆಳೆಯುತ್ತಿದೆ. ರಾಜ ಬೀದಿಗಳು, ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ, ವರ್ಣರಂಜಿತ ಬಾವುಟಗಳು, ಗಣ್ಯರಿಗೆ ಸ್ವಾಗತ ಕಮಾನುಗಳು ಹೀಗೆ ತುಮಕೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು ವಿಶೇಷ ಗಮನ ಸೆಳೆಯಿತು.
ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಮಾನ್ಯ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಅಲ್ಲದೆ, ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸುವ ಮೂಲಕ ಕರ್ನಾಟಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಅಲ್ಲದೆ, ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಕ್ರೀಡಾಪಟು ಕೃಷಿಕ್ ಅವರು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಕರ್ನಾಟಕದ ವಿವಿಧ ಜಾನಪದ ಕಲಾತಂಡಗಳು ಪಥಸಂಚಲನೆಯಲ್ಲಿ ಕ್ರೀಡಾಪಟುಗಳನ್ನು ಹಿಂಬಾಲಿಸಿದ್ದು ಪ್ರೇಕ್ಷಕರ ಗಮನ ಸೆಳೆಯಿತು.
ಶನಿವಾರದಿಂದ ಮುಂದಿನ ಗುರುವಾರದವರೆಗೆ ತುಮಕೂರು ನಗರದಲ್ಲಿ ಕರ್ನಾಟಕ ಕ್ರೀಡಾಕೂಟದ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಜನವರಿ 22ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ
ಕಾರ್ಯಕ್ರಮದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಡಾ: ಕೆ. ಗೋವಿಂದ ರಾಜು, ನವದೆಹಲಿ ವಿಶೇಷ ಪ್ರತಿನಿಧಿ ಹಾಗೂ ಸಿರಾ ಶಾಸಕ ಟಿ .ಬಿ ಜಯಚಂದ್ರ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್ ರಾಜಣ್ಣ, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್. ಶ್ರೀನಿವಾಸ್, ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಬಿ. ಸುರೇಶ್ ಗೌಡ, ಕೆ. ಷಡಾಕ್ಷರಿ, ಹೆಚ್.ವಿ. ವೆಂಕಟೇಶ್, ಆರ್. ರಾಜೇಂದ್ರ, ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ. ಅನಂತರಾಜ್, ಯುವ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಯುಕ್ತರಾದ ಚೇತನ್ ಆರ್., ಬಿ.ಎಂ.ಟಿ.ಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
