IMG 20260302 WA0011

ಪಾವಗಡ : ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು….!

DISTRICT NEWS ತುಮಕೂರು

ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ಕೆ. ಎಸ್ ಅನಿಲ್ ಕುಮಾರ್.

ಪಾವಗಡ: ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಗುರು-ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯವೆಂದು ಜ್ಞಾನಭೋದಿನಿ ಶಾಲೆಯ ಕಾರ್ಯದರ್ಶಿ ಕೆ ಎಸ್ ಅನಿಲ್ ಕುಮಾರ್ ತಿಳಿಸಿದರು.

ಪಟ್ಟಣದ ಜ್ಞಾನಭೋದಿನಿ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ, ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಕರು ಮತ್ತು ಶಿಕ್ಷಕರನ್ನು ನಿರ್ಲಕ್ಷಿಸದೆ ಅವರನ್ನು ಗೌರವಿಸುವ ಮನೋಭಾವವು ವಿದ್ಯಾರ್ಥಿಗಳನ್ನು ಆದರ್ಶ ವ್ಯಕ್ತಿಗಳನ್ನಾಗಿ ಮಾಡುತ್ತದೆ ಎಂದರು.

ಶಾಲಾ ಹಂತದ ಕೊನೆ ಘಟ್ಟ ಎಸ್ ಎಸ್ ಎಲ್ ಸಿ ಯಾಗಿದ್ದು ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಲ್ಲಿ ಉತ್ತಮವಾಗಿ ಓದಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

IMG 20260302 WA0014

ವಿದ್ಯಾರ್ಥಿಗಳನ್ನು ತಿದ್ದಿ ತೀಡುವ ಗುರು ತರದ ಜವಾಬ್ದಾರಿಯನ್ನು ಶಿಕ್ಷಕರು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಿಕ್ಷಕರ ಪರಿಶ್ರಮ ಅಮೋಘವೆಂದರು.

ಕಾರ್ಯಕ್ರಮ ಉದ್ದೇಶಿಸಿ ಜ್ಞಾನಭೋದಿನಿ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ

ಮಕ್ಕಳಲ್ಲಿ ಅಕ್ಷರ ಜ್ಞಾನದ ಜೊತೆಗೆ ಆತ್ಮಸ್ಥೈರ್ಯ ತುಂಬುವ, ನೈತಿಕ ಮೌಲ್ಯಗಳನ್ನು ಬಿತ್ತುವ ಕಾರ್ಯವಾಗಬೇಕೆಂದು.ಆಗ ಮಾತ್ರ ಮಕ್ಕಳು ಯಶಸ್ಸಿನ ಬೆನ್ನಟ್ಟಿ ಸುಂದರ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಜ್ಞಾನ ಬೋಧಿನಿ ಶಾಲೆಯಲ್ಲಿ ಮೊದಲ ಬಾರಿಗೆ ಗ್ರಾಜುಯೇಷನ್ ಡೇ ಹಮ್ಮಿಕೊಂಡು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಗುತ್ತಿದೆ ಎಂದರು.

ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಉತ್ತಮ ಜೀವನ ರೂಪಿಸಿಕೊಂಡು, ತಾವು ಕಲಿತ ಶಾಲೆ, ಗುರುಗಳಿಗೆ ಮತ್ತು ತಂದೆ-ತಾಯಿಯರಿಗೆ ಉತ್ತಮ ಕೊಡುಗೆ ನೀಡಬೇಕೆಂದರು.

ತಾಲೂಕಿನ ಯಾವುದೇ ಖಾಸಗಿ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 625 ಅಂಕ ಗಳಿಸಿದರೆ ಐವತ್ತು ಸಾವಿರ ಬಹುಮಾನ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿವಿಧ ಕ್ರೀಡೆಗಳಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ ಎಸ್ ಕೆ ಸಂಘದ ಆಡಳಿತ ಅಧಿಕಾರಿ ಮಂಜುನಾಥ್, ಅನಂತರಾಮ್ ಭಟ್, ಮುಖ್ಯ ಶಿಕ್ಷಕ ಮೈಲಾರೆಡ್ಡಿ, ಸಹಾಯಕ ಮುಖ್ಯ ಶಿಕ್ಷಕಿ ಸಂಧ್ಯಾರಾಣಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದ ದವರು ಹಾಜರಿದ್ದರು.