IMG 20260312 WA0010

ಪಾವಗಡ : ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯಕ್ಕೆ ಬಳಿಸಿದರೆ ಕ್ರಮ….!

DISTRICT NEWS ತುಮಕೂರು

ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯಕ್ಕೆ ಬಳಿಸಿದರೆ ಕ್ರಮ ಕೈಗೊಳ್ಳಲಾಗುವುದು. ತಹಶೀಲ್ದಾರ್ ವೈ ರವಿ.

ಪಾವಗಡ: ಪ್ರಸ್ತುತ ಜಾಗತಿಕ ರಾಜಕೀಯ ಪರಿಸ್ಥಿತಿಗಳಿಂದ ಇಂಧನ ಸರಬರಾಜಿನಲ್ಲಿ ಅಲ್ಪ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗಿದೆ ಎಂದು ತಹಶೀಲ್ದಾರ್ ವೈ ರವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿನ ಹೋಟೆಲ್, ಬೇಕರಿ, ಬೀದಿ ಬದಿ ವ್ಯಾಪಾರಿಗಳು ಗೃಹ ಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗಾಗಿ ಉಪಯೋಗಿಸುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಲಿಕ್ಸಿಫೈಡ್ ಪೆಟ್ರೋಲಿಯಂ ಗ್ಯಾಸ್(ರೆಗ್ಯುಲೇಷನ್ ಆಫ್ ಸಪ್ಪೆ, ಅಂಡ್ ಡಿಸ್ಟ್ರಿಬ್ಯೂಷನ್) ಆದೇಶ-2000 ರನ್ವಯ ಪ್ರಕರಣ ದಾಖಲಿಸಲಾಗುವುದು ಎಂಬ ಎಚ್ಚರಿಕೆ ನೀಡಿದ್ದಾರೆ.

ಪಾವಗಡ ತಾಲ್ಲೂಕಿನಲ್ಲಿ ಅಡುಗೆ ಅನಿಲ ಸಿಲಿಂಡರ್‌ಗಳು ಅವಶ್ಯಕತೆಗೆ ತಕ್ಕಂತೆ ಸರಬರಾಜು ಆಗುತ್ತಿದೆ. ಸಾರ್ವಜನಿಕರು ಯಾವುದೇ ಆಂತಕಕ್ಕೆ ಒಳಗಾಗುವ ಅವಶ್ಯಕತೆ ಇರುವುದಿಲ್ಲ. ತೈಲ ಕಂಪನಿಗಳಿಂದ ಅಡುಗೆ ಅನಿಲ ಸಿಲಿಂಡರ್‌ಗಳು ಸರಬರಾಜು ಆಗುತ್ತಿದ್ದು, ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿ ಕೊಡಬಾರದೆಂದು ತಹಶೀಲ್ದಾರ್ ವೈ ರವಿ ತಿಳಿಸಿದ್ದಾರೆ.

 

.