* ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು
* ಪಶ್ಚಿಮ ಏಷ್ಯಾದ ಬಿಕ್ಕಟ್ಟಿನಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು “ಟೀಮ್ ಇಂಡಿಯಾ” ಆಗಿ ಒಟ್ಟಾಗಿ ಕೆಲಸ ಮಾಡುವ ಮೂಲಕ ದೇಶವು ಯಶಸ್ವಿಯಾಗಿ ಜಯಿಸಲಿದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು
* ಆರ್ಥಿಕ ಮತ್ತು ವ್ಯಾಪಾರ ಸ್ಥಿರತೆಯನ್ನು ಕಾಪಾಡುವುದು, ಇಂಧನ ಭದ್ರತೆಯನ್ನು ಖಚಿತಪಡಿಸುವುದು, ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸುವುದು ಮತ್ತು ಕೈಗಾರಿಕೆ ಹಾಗೂ ಪೂರೈಕೆ ಸರಪಳಿಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಗಳಾಗಿವೆ ಎಂದು ಪ್ರಧಾನಮಂತ್ರಿ ಒತ್ತಿಹೇಳಿದರು
* ಪೂರೈಕೆ ಸರಪಳಿಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅಕ್ರಮ ದಾಸ್ತಾನು ಹಾಗೂ ಲಾಭಕೋರತನದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರಧಾನಮಂತ್ರಿ ರಾಜ್ಯಗಳಿಗೆ ಸೂಚಿಸಿದರು
* ಕೃಷಿ ವಲಯದಲ್ಲಿ ಮುನ್ನೆಚ್ಚರಿಕೆ ಯೋಜನೆಯ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿಹೇಳಿದರು, ವಿಶೇಷವಾಗಿ ರಸಗೊಬ್ಬರ ಸಂಗ್ರಹಣೆ ಮತ್ತು ವಿತರಣೆಯನ್ನು ಮೇಲ್ವಿಚಾರಣೆ ಮಾಡಲು ಸೂಚಿಸಿದರು
* ಉದ್ಭವಿಸುತ್ತಿರುವ ಸಂದರ್ಭಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಎಲ್ಲಾ ಹಂತಗಳಲ್ಲಿ ಬಲವಾದ ಸಮನ್ವಯ ವ್ಯವಸ್ಥೆಗಳ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿಹೇಳಿದರ
* ಹಡಗು ಸಂಚಾರ, ಅಗತ್ಯ ವಸ್ತುಗಳ ಪೂರೈಕೆ ಮತ್ತು ಕಡಲ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಗಡಿ ಮತ್ತು ಕರಾವಳಿ ರಾಜ್ಯಗಳಲ್ಲಿ ವಿಶೇಷ ಗಮನ ಹರಿಸುವಂತೆ ಪ್ರಧಾನಮಂತ್ರಿ ಕರೆ ನೀಡಿದರು
* ತಪ್ಪು ಮಾಹಿತಿ ಮತ್ತು ವದಂತಿಗಳ ಹರಡುವಿಕೆಯ ವಿರುದ್ಧ ಪ್ರಧಾನಮಂತ್ರಿ ಎಚ್ಚರಿಕೆ ನೀಡಿದರು ಹಾಗೂ ನಿಖರ ಮತ್ತು ವಿಶ್ವಾಸಾರ್ಹ ಮಾಹಿತಿಯ ಪ್ರಸಾರವನ್ನು ಒತ್ತಿ ಹೇಳಿದರು
* ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು
* ಜಾಗತಿಕ ಅನಿಶ್ಚಿತತೆಯ ನಡುವೆ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿರುವುದು ಮತ್ತು ರಾಜ್ಯಗಳಿಗೆ ವಾಣಿಜ್ಯ ಎಲ್ ಪಿ ಜಿ ಹಂಚಿಕೆಯನ್ನು ಹೆಚ್ಚಿಸಿರುವ ನಿರ್ಧಾರಗಳನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದರು
* ತಮ್ಮ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿ ಜಿ ಲಭ್ಯತೆ ಸಮರ್ಪಕವಾಗಿದ್ದು, ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು
* ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಕೇಂದ್ರದೊಂದಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡುವ
ಬದ್ಧತೆಯನ್ನು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು
ವವದೆಹಲಿ : ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉದ್ಭವಿಸಿರುವ ಪರಿಸ್ಥಿತಿಯ ಸಿದ್ಧತೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ಸಭೆ ನಡೆಸಿದರು
ಸಭೆಯ ಸಂದರ್ಭದಲ್ಲಿ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಮಾತನಾಡಿ, ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಸರ್ಕಾರವು ಈ ಬಿಕ್ಕಟ್ಟನ್ನು ಎದುರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಎಲ್ ಪಿ ಜಿ ಲಭ್ಯತೆಯನ್ನು ಖಚಿತಪಡಿಸುವುದು ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವಂತಹ ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು. ಪ್ರಸ್ತುತ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರದ ಸಾಮೂಹಿಕ ಕ್ರಮದ ಅಗತ್ಯವಿದೆ ಎಂದು ಅವರು ಒತ್ತಿಹೇಳಿದರು.
ಸಂಪುಟ ಕಾರ್ಯದರ್ಶಿ ಶ್ರೀ ಟಿ.ವಿ. ಸೋಮನಾಥನ್ ಅವರು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಪ್ರಸ್ತುತಿಯನ್ನು ನೀಡಿದರು ಮತ್ತು ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳಿಗೆ ಕ್ರಮಗಳು ಶಿಫಾರಸುಗಳನ್ನು ಪಟ್ಟಿ ಮಾಡಿದರು.
ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಮಂತ್ರಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು. ಈ ಬಿಕ್ಕಟ್ಟಿನ ನಡುವೆ ವಿದೇಶದಲ್ಲಿರುವ ಭಾರತೀಯ ನಾಗರಿಕರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಧಾನಮಂತ್ರಿಯವರು ವಿವಿಧ ದೇಶಗಳೊಂದಿಗೆ ನಡೆಸಿದ ರಾಜತಾಂತ್ರಿಕ ಸಂಪರ್ಕವನ್ನು ಅವರು ಶ್ಲಾಘಿಸಿದರು.
ರಾಜ್ಯಗಳಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿ ಜಿ ಲಭ್ಯತೆ ಸಮರ್ಪಕವಾಗಿದ್ದು, ಪರಿಸ್ಥಿತಿ ಸ್ಥಿರವಾಗಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ನಿರ್ಧಾರವನ್ನು ಅವರು ಸ್ವಾಗತಿಸಿದರು, ಇದು ಜಾಗತಿಕ ಅನಿಶ್ಚಿತತೆಯ ನಡುವೆ ನಾಗರಿಕರಿಗೆ ಗಮನಾರ್ಹ ಪರಿಹಾರ ನೀಡುತ್ತದೆ ಎಂದು ತಿಳಿಸಿದರು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಾಣಿಜ್ಯ ಎಲ್ ಪಿ ಜಿ ಹಂಚಿಕೆಯನ್ನು ಶೇಕಡಾ 50 ರಿಂದ ಶೇಕಡಾ 70 ಕ್ಕೆ ಹೆಚ್ಚಿಸುವ ನಿರ್ಧಾರವನ್ನೂ ಮುಖ್ಯಮಂತ್ರಿಗಳು ಸ್ವಾಗತಿಸಿದರು. ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ನಾಗರಿಕರ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರದೊಂದಿಗೆ ನಿಕಟ ಸಮನ್ವಯದಲ್ಲಿ ಕೆಲಸ ಮಾಡುವ ಬದ್ಧತೆಯನ್ನು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.
