IMG 20260530 WA0065 scaled

Karnataka : ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ಯಮಂತ್ರಿ ಯಾಗಿ ಪದಗ್ರಹಣ…..!

Genaral National - ಕನ್ನಡ STATE

ಜೂನ್ 3 ರಂದು ಡಿ ಕೆ ಶಿವಕುಮಾರ್  ಮುಖ್ದಮಂತ್ರಿ ಯಾಗಿ . ಪದಗ್ರಹಣ…

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆ ಆಗಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಡಿ.ಕೆ.ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ*

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ನೂತನ ಆಯ್ಕೆ ನಡೆಯಿತು. ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಡಿ ಕೆ ಶಿವಕುಮಾರ್ ಅವರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದರು.

ಡಾ. ಜಿ ಪರಮೇಶ್ವರ್ ಅವರು ಅನುಮೋದಿಸಿದರು. ಇದನ್ನು ಸಭೆಯು ಒಕ್ಕೊರಲಿನಿಂದ ಬೆಂಬಲಿಸಿತು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಘೋಷಿಸಿದರು.

ಇದಕ್ಕೂ ಮೊದಲು ಸಭೆಯ ಆರಂಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ಪ್ರಕ್ರಿಯೆಯು ಸಿಎಂ ಸಿದ್ದರಾಮಯ್ಯ ಅವರ ಪ್ರಸ್ತಾವನೆಯೊಂದಿಗೆ ನಡೆಯಲಿದೆ ಎಂದು ಎಐಸಿಸಿ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಪ್ರಕಟಿಸಿ, ಚಾಲನೆ ನೀಡಿದರು.

ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ವಿಚಾರವನ್ನು ಎಐಸಿಸಿ ವಿವೇಚನೆಗೆ ಬಿಡಲಾಗಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದರು. ಪರಮೇಶ್ವರ್ ಅವರು ಅನುಮೋದಿಸಿದರು. ಎಲ್ಲ ಶಾಸಕರು ಕೈ ಎತ್ತುವ ಮೂಲಕ ಇದನ್ನು ಬೆಂಬಲಿಸಿದರು.

IMG 20260530 WA0068

ನಂತರ 10 ನಿಮಿಷಗಳ ವಿರಾಮ ನೀಡಲಾಗಿದೆ ಎಂದು ಸುರ್ಜೆವಾಲ ಹೇಳಿದರು.ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಿಎಂ ಕೊಠಡಿಗೆ ತೆರಳಿದರು.

ಅಲ್ಲಿಂದ ಸಮ್ಮೇಳನ ಸಭಾಂಗಣಕ್ಕೆ ಮೂವರು ವಾಪಸ್ಸು ಬಂದ ನಂತರ ಶಾಸಕಾಂಗ ಪಕ್ಷದ ನೂತನ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.

ನಂತರ ನೂತನ ನಾಯಕ ಡಿ ಕೆ ಶಿವಕುಮಾರ್ ಅವರು ನಿರ್ಗಮಿತ ನಾಯಕ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿಯ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಸಭೆ ಒಕ್ಕೋರಲಿನಿಂದ ಬೆಂಬಲಿಸಿತು.

*ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಡಿ.ಕೆ.ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ*

IMG 20260530 WA0069
ಜೂನ್ 3 ರಂದು ಡಿ ಕೆ ಶಿವಕುಮಾರ್ ಅವರ ಪದಗ್ರಹಣ

*ಸಿದ್ದರಾಮಯ್ಯ ಅವರ ಕಾಲವಧಿ ಸುವರ್ಣಯುಗ*

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಏಕಮತದಿಂದ ಆಯ್ಕೆಯಾದ ನಾಯಕರಿಗೂ ಹಾಗೂ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಿಯುಕ್ತರಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಹೋರಾಟವೇ ಜೀವನವಾಗಿಸಿಕೊಂಡಿರುವ ಅವರು, ಕಾಂಗ್ರೆಸ್ ಸಿದ್ಧಾಂತಗಳನ್ನು ರಕ್ತದಲ್ಲಿ ಬೆರೆಸಿಕೊಂಡ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು; ಅಪರೂಪದ ಸಂಘಟನಾ ಸಾಮರ್ಥ್ಯ ಹೊಂದಿದ ನಾಯಕರು. ಅದಕ್ಕಿಂತಲೂ ಮುಖ್ಯವಾಗಿ, ಏಳು ಕೋಟಿ ಕನ್ನಡಿಗರ ಮೇಲಿನ ಅಪಾರ ಪ್ರೀತಿ, ಕಾಳಜಿ ಮತ್ತು ಕರುಣೆಯನ್ನು ಹೃದಯದಲ್ಲಿ ಹೊತ್ತಿರುವ ಅವರು, ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮತ್ತು ವೈಭವದ ಹೊಸ ಎತ್ತರಗಳಿಗೆ ಕೊಂಡೊಯ್ಯುವ ಮಹತ್ವಾಕಾಂಕ್ಷಿ ಕನಸನ್ನು ಹೊಂದಿದ್ದಾರೆ. ಅವರ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ.IMG 20260530 WA0057

ಶ್ರೀ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷಕ್ಕಾಗಿ ಸಲ್ಲಿಸಿದ ಅಮೂಲ್ಯ ಸೇವೆಗೆ ಹೃತ್ಪೂರ್ವಕ ಧನ್ಯವಾದಗಳು.

ಕರ್ನಾಟಕದ ಕಾಂಗ್ರೆಸ್ ಮುಖ್ಯಮಂತ್ರಿಯಾಗಿ ಅವರು ನಿರ್ವಹಿಸಿದ ಎಂಟು ವರ್ಷಗಳ ಅವಧಿ, ದೂರದೃಷ್ಟಿಯ ನಾಯಕತ್ವ, ಸಾಮಾಜಿಕ ನ್ಯಾಯದತ್ತ ಅಚಲ ಬದ್ಧತೆ ಹಾಗೂ ಜನಕಲ್ಯಾಣ ಮತ್ತು ಅಭಿವೃದ್ಧಿಯನ್ನು ಸಮಾನವಾಗಿ ಮುನ್ನಡೆಸಿದ ಸುವರ್ಣಯುಗವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ.

ವೈಯಕ್ತಿಕವಾಗಿ ಅವರೊಂದಿಗೆ ಕೆಲಸ ಮಾಡುವ, ಅವರ ಅನುಭವ ಮತ್ತು ನಾಯಕತ್ವದಿಂದ ಕಲಿಯುವ ಹಾಗೂ ಕಾಂಗ್ರೆಸ್‌ನ ‘ಅಭಿವೃದ್ಧಿಯೊಂದಿಗೆ ಕಲ್ಯಾಣ’ ಎಂಬ ತತ್ವವನ್ನು ಸರ್ಕಾರದ ನೀತಿಗಳಾಗಿ ರೂಪಿಸುವ ಅವಕಾಶ ನನಗೆ ದೊರೆತಿದ್ದು ಮಹತ್ತರ ಗೌರವವಾಗಿದೆ. ವಿಶೇಷವಾಗಿ, ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಜನರ ಬದುಕು ಬದಲಿಸಿದ ಪರಿಣಾಮಕಾರಿ ಕಾರ್ಯಕ್ರಮಗಳಾಗಿ ಜಾರಿಗೊಳಿಸಿದ ಪಯಣ ಎಂದೆಂದಿಗೂ ಸ್ಮರಣೀಯವಾಗಿರುತ್ತದೆ.

ನಮ್ಮ ಶಾಸಕರು, ಸಚಿವರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಲಕ್ಷಾಂತರ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷವೇ ಏಕೈಕ ಭರವಸೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅವರೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಗಳು.

ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ, ಪರಸ್ಪರ ಐಕ್ಯತೆ ಮತ್ತು ಸಹಕಾರದೊಂದಿಗೆ…

ಕರ್ನಾಟಕದ ಅಭಿವೃದ್ಧಿಗಾಗಿ,
ಕರ್ನಾಟಕದ ಜನರ ಕಲ್ಯಾಣಕ್ಕಾಗಿ,
ಶಾಂತಿ, ಪ್ರಗತಿ ಮತ್ತು ಸಹೋದರತ್ವಕ್ಕಾಗಿ…

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ!

*-ರಣದೀಪ್ ಸಿಂಗ್ ಸುರ್ಜೇವಾಲ*
ಪ್ರಧಾನ ಕಾರ್ಯದರ್ಶಿಗಳು, ಎಐಸಿಸಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ

Leave a Reply

Your email address will not be published. Required fields are marked *