RAK 7193 scaled

ತುಮಕೂರು : ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭ…..!

DISTRICT NEWS ತುಮಕೂರು

ತುಮಕೂರು  ಜಿಲ್ಲೆಯಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭ…..!

ತುಮಕೂರು :   ಬ್ರಿಟೀಷರಿಂದ ಸ್ವತಂತ್ರಗೊಂಡ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿ ವಿಶ್ವ ಭೂಪಟದಲ್ಲಿ ಗಮನ ಸೆಳೆದು ಮಂಚೂಣಿ ರಾಷ್ಟ್ರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನವನ್ನು ಭಾರತ ಹೊಂದಿದೆ. ಕೈಗಾರಿಕೆ, ತಂತ್ರಜ್ಞಾನ, ಕೃಷಿ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿ ವಿಶ್ವದ ಗಮನ ಸೆಳೆದಿದೆ. ಇಂತಹ ಸ್ವತಂತ್ರ ಭಾರತದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವನಾಗಿ, ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವನಾಗಿ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಅತ್ಯಂತ ಖುಷಿ ಮತ್ತು ಸಂಭ್ರಮದಿಂದ ನೆರವೇರಿಸಿದ್ದೇನೆ

ನಾಡಿನ ಸಮಸ್ತ ಜನತೆಯ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಕೊಂಡೊಯ್ಯಲು ಸಂಕಲ್ಪ ಮಾಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ರಾಜ್ಯದ ಬಡಜನರ ಏಳಿಗೆಗಾಗಿ ಹಲವಾರು ನೂತನ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಜನರ ವಿಶ್ವಾಸ ಹಾಗೂ ಪ್ರೀತಿಯನ್ನು ಗಳಿಸಿದ್ದೇವೆ.

ನಮ್ಮ ಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಸೇರಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅರ್ಥಶಾಸ್ತ್ರಜ್ಞ ಅಮತ್ರ್ಯ ಸೇನ್ ಅವರ “ಅಭಿವೃದ್ಧಿಯೇ ಸ್ವಾತಂತ್ರ್ಯ” ಎಂಬ ಸೂತ್ರದಲ್ಲಿ ನಂಬಿಕೆಯಿಟ್ಟು ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿದ್ದೇವೆ.

RAK 7198

 ಪಂಚ ಗ್ಯಾರಂಟಿಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಉದ್ದೇಶದಿಂದ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಜುಲೈ-2026ರÀ ಮಾಹೆಯವರೆಗೆ 11128 ಮೆ.ಟನ್ ಅಕ್ಕಿಯನ್ನು ವಿತರಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯಲ್ಲಿ 6,27,049 ಪಡಿತರ ಚೀಟಿಗಳ 22.25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಿದೆ.

 2025-26ನೇ ಸಾಲಿನಲ್ಲಿ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ 4,886 ರೂ.ಗಳ ದರದಲ್ಲಿ ಜಿಲ್ಲೆಯ 54,025 ರೈತರಿಂದ ನೇರವಾಗಿ ಒಟ್ಟು 12,32,508 ಕ್ವಿಂಟಾಲ್ ರಾಗಿ ಖರೀದಿಸಿದೆ.

 ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರು ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಲು 2023ರ ಜೂನ್ 11 ರಿಂದ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಮಹತ್ವಪೂರ್ಣ ಯೋಜನೆಯಿಂದಾಗಿ ಜಿಲ್ಲೆಯಲ್ಲಿ 23.52 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.

 ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಸಲುವಾಗಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಪ್ರತಿಷ್ಠಿತ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತಿದ್ದು, ಈವರೆಗೆ ಜಿಲ್ಲೆಯಲ್ಲಿ 6,19,452 ಫಲಾನುಭವಿಗಳ ಖಾತೆಗೆ ಒಟ್ಟು 3783.40 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ.

 ಸರ್ಕಾರವು 200 ಯೂನಿಟ್‍ಗಳಿಗಿಂತ ಕಡಿಮೆ ಉಪಯೋಗಿಸುವ ಗೃಹ ಬಳಕೆದಾರರಿಗೆ ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಡಿ ಜಿಲ್ಲೆಯ 8 ಲಕ್ಷ ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದು, ಯೋಜನೆಗಾಗಿ ಈವರೆಗೂ 872.07 ಕೋಟಿ ರೂ. ಖರ್ಚು ಮಾಡಲಾಗಿದೆ.
 ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಯುವನಿಧಿ ಯೋಜನೆಯಡಿ 2023, 2024, 2025, 2026ರಲ್ಲಿ ಡಿಪ್ಲೊಮಾ ಉತ್ತೀರ್ಣರಾದವರಿಗೆ 1,500 ರೂ. ಹಾಗೂ ಯಾವುದೇ ಪದವಿ ಉತ್ತೀರ್ಣರಾದÀವರಿಗೆ 3,000 ರೂ.ಗಳ ಉದ್ಯೋಗ ಭತ್ಯೆಯನ್ನು ಗರಿಷ್ಠ 2 ವರ್ಷಗಳ ಅವಧಿವರೆಗೂ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 10,814 ಅರ್ಹ ನಿರುದ್ಯೋಗಿ ಫಲಾನುಭವಿಗಳಿಗೆ ಒಟ್ಟು 34.38 ಕೋಟಿ ರೂ.ಗಳ ಉದ್ಯೋಗಭತ್ಯೆಯನ್ನು ಡಿ.ಬಿ.ಟಿ. ಮೂಲಕ ಪಾವತಿ ಮಾಡಲಾಗಿದೆ.

ಈ ಎಲ್ಲಾ ಯೋಜನೆಗಳಿಂದಾಗಿ ಜಿಲ್ಲೆಯ ಜನರಲ್ಲಿ ಅಭಿವೃದ್ಧಿಯ ಹೊಸ ಅಧ್ಯಾಯ ಪ್ರಾರಂಭವಾಗಿದೆ.

RAK 6942

 ಜಿಲ್ಲೆಯಲ್ಲಿ ಜೂನ್ ಮಾಹೆಯಿಂದ ಈವರೆಗೂ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಿದೆ. ಜೂನ್ ಮಾಹೆಯಲ್ಲಿ ಶೇ.20ರಷ್ಟು ಹಾಗೂ ಜುಲೈ ಮಾಹೆಯಲ್ಲಿ ಶೇ. 75ರಷ್ಟು ಮಳೆ ಕೊರತೆಯಾಗಿದೆ. ಸಮರ್ಪಕವಾಗಿ ಮಳೆಯಾಗದ ಕಾರಣ ಬೆಳೆಗಳು ರೈತರ ಕೈತಪ್ಪಿ ಹೋಗಿದ್ದು, ಜಿಲ್ಲೆಯಲ್ಲಿ ಬರದ ಛಾಯೆ ಎದುರಾಗಿದೆ.
 ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಬರಪರಿಸ್ಥಿತಿಯನ್ನು ಅವಲೋಕಿಸಲಾಗಿದ್ದು, ಬರ ನಿರ್ವಹಣೆಯ ನೆರವು ಕೋರಿ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಲಾಗಿದೆ.
 ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 3.11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಜಿಲ್ಲೆಯ 20185 ರೈತರಿಗೆ 7837 ಕ್ವಿಂಟಾಲ್ ಬಿತ್ತನೆ ಬೀಜವನ್ನು ವಿತರಿಸಲಾಗಿದೆ.
 ತೋಟಗಾರಿಕೆ ಬೆಳೆಯನ್ನು ಬೆಳೆಯುವ ರೈತರ ಸರ್ವತೋಮುಖ ಅಭಿವೃದ್ದಿಗೆ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ, ಹನಿ ನೀರಾವರಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ, ಜೇನು ಸಾಕಾಣಿಕೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಗಳಡಿ 29 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ 6862 ಫಲಾನುಭವಿಗಳಿಗೆ ಸಹಾಯಧನ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
 ತುಮಕೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ತಾವು ಬೆಳೆದ ರೇಷ್ಮೆ ಗೂಡುಗಳಿಗೆ ಗರಿಷ್ಠ ಧಾರಣೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 2974 ಮೆ.ಟನ್ ದ್ವಿತಳಿ ಗೂಡು ಹಾಗೂ 5008 ಮೆ.ಟನ್ ಒಟ್ಟು ಗೂಡು ಉತ್ಪಾದಿಸಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.

 ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯು ತುಮಕೂರು ಜಿಲ್ಲೆಯ 4 ತಾಲೂಕುಗಳ ಒಟ್ಟು 77 ಗ್ರಾಮಗಳ ಮೂಲಕ 104.02 ಕಿ.ಮೀ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಒಟ್ಟು ಅವಶ್ಯಕವಾದ 1396 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಈಗಾಗಲೇ ಶೇಕಡ 99.9ರಷ್ಟು ಜಮೀನನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಡಿಸೆಂಬರ್ 2027ರ ಅಂತ್ಯದ ವೇಳೆಗೆ ರೈಲ್ವೆ ಸಂಚಾರ ಪ್ರಾರಂಭವಾಗಲಿದೆ.
 ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯು ತುಮಕೂರು ಜಿಲ್ಲೆಯ 2 ತಾಲೂಕುಗಳ ಒಟ್ಟು 35 ಗ್ರಾಮಗಳ ಮೂಲಕ 58.69 ಕಿ.ಮೀ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಒಟ್ಟು ಅವಶ್ಯಕವಾದ 845 ಎಕರೆ ಜಮೀನಿನ ಪೈಕಿ ಈವರೆಗೂ 816 ಎಕರೆ ಅಂದರೆ ಶೇಕಡ 97ರಷ್ಟು ಜಮೀನನ್ನು ಭೂಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು, ಡಿಸೆಂಬರ್ 2027ರ ಅಂತ್ಯದ ವೇಳೆಗೆ ರೈಲ್ವೆ ಸಂಚಾರ ಪ್ರಾರಂಭವಾಗಲಿದೆ.

 ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿರುವ ಬಹು ನಿರೀಕ್ಷಿತ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯು ಜಿಲ್ಲೆಯ 8 ತಾಲ್ಲೂಕುಗಳಲ್ಲಿ ಒಟ್ಟು 197 ಗ್ರಾಮಗಳ ಮೂಲಕ 163 ಕಿ.ಮೀ. ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು, ಅವಶ್ಯಕವಾದ 3,118 ಎಕರೆ ಜಮೀನಿನ ಪೈಕಿ ಶೇ.97ರಷ್ಟು ಭೂ ಸ್ವಾಧೀನಪಡಿಸಿಕೊಂಡು ಕೋರಿಕೆ ಸಂಸ್ಥೆಗೆ ಹಸ್ತಾಂತರಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ.

 ಹೇಮಾವತಿ ನಾಲಾ ಯೋಜನೆಯು ಜಿಲ್ಲೆಯ ಕೆರೆಗಳಿಗೆ ಅಂತರ್ಜಲ ಉತ್ತೇಜನಕ್ಕಾಗಿ ಹೇಮಾವತಿ ನದಿಯಿಂದ ನೀರನ್ನು ಪಂಪ್ ಮಾಡಿ ಗುರುತ್ವಾಕರ್ಷಣ ಕಾಲುವೆಗಳ ಮೂಲಕ 5 ತಾಲ್ಲೂಕುಗಳ ಒಟ್ಟು 94 ಗ್ರಾಮಗಳಿಗೆ ನೀರೊದಗಿಸಲು ಲಿಂಕ್ ಕೆನಾಲ್ ಯೋಜನೆ ಸೇರಿ ಒಟ್ಟು 515 ಎಕರೆ ಜಮೀನಿನ ಪೈಕಿ ಶೇಕಡ 75ರಷ್ಟು ಜಮೀನನ್ನು ಭೂಸ್ವಾಧೀನಪಡಿಸಿಕೊಂಡು ಭೂ ಕೋರಿಕೆ ಸಂಸ್ಥೆಗೆ ಹಸ್ತಾಂತರಿಸಲಾಗಿದೆ.

 ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ತುಮಕೂರು ಜಿಲ್ಲೆಯ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಒಟ್ಟು 5 ಹಂತಗಳಲ್ಲಿ ಶಿರಾ ತಾಲ್ಲೂಕು ಸೇರಿದಂತೆ ತುಮಕೂರು ತಾಲ್ಲೂಕಿನ ವಸಂತನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಚೆನ್ನೈ-ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗಳಿಗಾಗಿ ಒಟ್ಟು 10151 ಎಕರೆ ಜಮೀನಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಸ್ವಾಧೀನಗೊಂಡ ಜಮೀನುಗಳಿಗೆ ಈವರೆವಿಗೆ ಒಟ್ಟು 1168 ಕೋಟಿ ರೂ.ಗಳ ಪರಿಹಾರ ಪಾವತಿಸಲಾಗಿದ್ದು, 6ನೇ ಹಂತದ 4731 ಎಕರೆ ಜಮೀನಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದು, ಜೆಎಂಸಿ ಕಾರ್ಯ ಪ್ರಗತಿಯಲ್ಲಿದೆ.
 ನಕಲಿ ದಾಖಲೆಗಳನ್ನು ತಡೆಗಟ್ಟುವುದು ಹಾಗು ಸಾರ್ವಜನಿಕರು ಕಚೇರಿಗೆ ಹೋಗದೆ ಸರಳವಾಗಿ ದಾಖಲೆಗಳ ಪ್ರತಿಗಳನ್ನು ಪಡೆಯಲು ಜಾರಿಗೆ ತಂದಿರುವ ಭೂ ಸುರಕ್ಷಾ ಯೋಜನೆಯಡಿ ಈವರೆಗೆ 2.17 ಕೋಟಿ ಪುಟಗಳು ಸ್ಕ್ಯಾನ್ ಮಾಡಲಾಗಿದ್ದು, ಈವರೆಗೂ ಸ್ಕ್ಯಾನ್ ಆಗಿರುವ 1,42,268 ಪುಟಗಳ ದಾಖಲೆಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕವೇ ನೀಡಲಾಗಿದೆ.
 ಹಕ್ಕುಪತ್ರ ವಿತರಣಾ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಗ್ರಾಮವಾಗಿ ರಚಿಸಲು ಈವರೆಗೂ ಗುರುತಿಸಲಾಗಿರುವ ದಾಖಲೆ ರಹಿತ 1312 ಜನವಸತಿ ಪ್ರದೇಶಗಳ ಪೈಕಿ ಈವರೆಗೂ ಸರ್ಕಾರದಿಂದ 945 ಗ್ರಾಮಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 848 ಗ್ರಾಮಗಳಿಗೆ ಅಂತಿಮ ಅಧಿಸೂಚನೆಯಾಗಿದೆ. ಉಳಿದ ಗ್ರಾಮಗಳು ವಿವಿಧ ಹಂತಗಳಲ್ಲಿ ಅಧಿಸೂಚನೆ ಹೊರಡಿಸಲು ಬಾಕಿ ಇದ್ದು, ಕಾರ್ಯ ಪ್ರಗತಿಯಲ್ಲಿದೆ.
 ಈವರೆಗೂ 22,067 ಅರ್ಹ ಫಲಾನುಭವಿಗಳ ಹಕ್ಕುಪತ್ರಗಳನ್ನು ಗಣಕೀಕರಣಗೊಳಿಸಲಾಗಿದ್ದು, ಮೇ 19ರಂದು ನಡೆದ ಕಂದಾಯ ಇಲಾಖೆಯ ಬೃಹತ್ ಸಮಾವೇಶದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರಿಂದ ಸವಲತ್ತು/ಹಕ್ಕುಪತ್ರಗಳನ್ನು ವಿತರಿಸÀಲಾಗಿದೆ. ಗಣಕೀಕೃತ ಹಕ್ಕುಪತ್ರಗಳನ್ನು ವಿತರಿಸಿರುವುದು ಗಿನ್ನಿಸ್ ವಲ್ರ್ಡ್ ಬುಕ್ ರೆಕಾರ್ಡ್‍ನಲ್ಲಿ ದಾಖಲಾಗಿದೆ.
 ಇ-ಪೌತಿ ಆಂದೋಲನವನ್ನು ಸರ್ಕಾರವು ಹೊಸ ತಂತ್ರಾಂಶದ ಮೂಲಕ ಸರಳೀಕರಣಗೊಳಿಸಿ ಅನುμÁ್ಠನಗೊಳಿಸಿದ್ದು, ಇದರಿಂದ ಸಾರ್ವಜನಿಕರಿಗೆ ಒಂದು, ಎರಡು ದಶಕಗಳಿಂದ ಅವರ ಪೂರ್ವಿಕರ ಹೆಸರಿನಲ್ಲಿರುವ ಜಮೀನುಗಳನ್ನು ಸರಳವಾಗಿ ಅವರ ವಾರಸುದಾರರಿಗೆ ಖಾತೆ ಮಾಡಬಹುದಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ಆಧಾರ್ ಸೀಡಿಂಗ್ ಅಂಕಿ ಅಂಶಗಳ ಪ್ರಕಾರ ಒಟ್ಟು 5.24ಲಕ್ಷ ಪ್ರಕರಣಗಳನ್ನು ಗುರುತಿಸಿದ್ದು, ಈ ಪೈಕಿ 2,25,078 ಅರ್ಜಿಯನ್ನು ಈಗಾಗಲೇ ವಿಲೇವಾರಿ ಮಾಡಲಾಗಿದೆ. ಇ-ಪೌತಿ ಆಂದೋಲನದಂತಹ ಸರ್ಕಾರದ ಸೌಲಭ್ಯವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡುತ್ತಿದ್ದೇನೆ.
 ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಮಾರ್ಚ್-2026ರ ಅಂತ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 28,215 ಎಂ.ಎಸ್.ಎಂ.ಇ ಕೈಗಾರಿಕೆಗಳು ನೋಂದಣಿಯಾಗಿರುತ್ತದೆ. ಸದರಿ ಕೈಗಾರಿಕೆಗಳಿಂದ ಒಟ್ಟು 712.23 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಿದ್ದು, 2,02,324 ಜನರಿಗೆ ನೇರ ಉದ್ಯೋಗವಕಾಶ ಸೃಷ್ಟಿಯಾಗಿದೆ.
 2025-26ನೇ ಸಾಲಿನಲ್ಲಿ ರಾಜ್ಯ ಉನ್ನತ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 26 ಕೈಗಾರಿಕೆಗಳು ಅನುಮೋದನೆಯಾಗಿದ್ದು, ಅನುμÁ್ಠನ ಹಂತದಲ್ಲಿರುತ್ತವೆ. ಈ ಕೈಗಾರಿಕೆಯಿಂದ ಜಿಲ್ಲೆಗೆ ಒಟ್ಟು 1185.91 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಸದರಿ ಕೈಗಾರಿಕೆಗಳಿಂದ ಒಟ್ಟು 7286 ನೇರ ಉದ್ಯೋಗ ಸೃಷ್ಟಿಯಾಗಲಿದೆ.
 ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ನಡೆದ ಉಟobಚಿಟ Iಟಿvesಣoಡಿs ಒeeಣ-2025ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ತುಮಕೂರು ಜಿಲ್ಲೆಯಲ್ಲಿ 7 ಬೃಹತ್ ಮತ್ತು ಭಾರಿ ಕೈಗಾರಿಕೆ ಆರಂಭಿಸಲು ಒಔU ಮಾಡಿಕೊಂಡಿರುತ್ತಾರೆ. ಈ ಕೈಗಾರಿಕೆಗಳಿಂದ ಒಟ್ಟು 75,480 ಕೋಟಿ ರೂ. ಬಂಡವಾಳ ಹೂಡಿಕೆ ನಿರೀಕ್ಷಿಸಲಾಗಿದೆ ಹಾಗೂ 29,200 ನೇರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
 ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದ 2ನೇ ಹಂತದ ಕೈಗಾರಿಕಾ ಪ್ರದೇಶದ ಅಭಿವೃದ್ಧಿಯ ಕಾಮಗಾರಿ ಮುಕ್ತಾಯ ಹಂತದಲ್ಲಿದೆ.

 ವಿಕಸಿತ ಭಾರತ್ ಗ್ರಾಮೀಣ ರೋಜ್‍ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯು ದೇಶಾದ್ಯಂತ ಜುಲೈ 1 ರಿಂದ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ರೂಪುರೇμÉಯನ್ನು ಸಿದ್ಧಪಡಿಸÀಲಾಗಿದೆ.

 ತುಮಕೂರು ಜಿಲ್ಲೆಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ 51,341 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಜುಲೈ ಆರಂಭದಿಂದ ಇಲ್ಲಿಯವರೆಗೆ ಸುಮಾರು 85 ಸಾವಿರಕ್ಕೂ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವ ಮೂಲಕ ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 330 ಗ್ರಾಮ ಪಂಚಾಯಿತಿಗಳಿಗೆ ಜುಲೈ-1ರಿಂದ ಒಟ್ಟು 59 ಕೋಟಿ ರೂ.ಗಳ ಕೂಲಿ ಮೊತ್ತ ಬಿಡುಗಡೆಯಾಗಿದ್ದು, ಇದುವರೆಗೂ 2 ಕೋಟಿ ರೂ.ಗಳ ಕೂಲಿ ಮೊತ್ತವನ್ನು ಫಲಾನುಭವಿಗಳಿಗೆ ನೀಡಲಾಗಿದೆ.

 ಸಂಜೀವಿನಿ-ಎನ್.ಆರ್.ಎಲ್.ಎಮ್. ಯೋಜನೆಯಡಿ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ 10 ತಾಲ್ಲೂಕುಗಳಲ್ಲಿ 14531 ಸ್ವ ಸಹಾಯ ಗುಂಪುಗಳು ಹಾಗೂ 1,42,209 ಸದಸ್ಯರು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದ ಬಡ ಮತ್ತು ದುರ್ಬಲ ಹೆಣ್ಣು ಮಕ್ಕಳ ಜೀವನೋಪಾಯವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ವೈಯಕ್ತಿಕವಾಗಿ ಮತ್ತು ಅವಲಂಬಿತ ಕುಟುಂಬಗಳ ಆದಾಯದ ಮಟ್ಟವನ್ನು ಹೆಚ್ಚಿಸಿದೆ.

 ಜನರ ಆರೋಗ್ಯದ ಹಿತದೃಷ್ಟಿಯಿಂದ 56 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾಕೇರ್ ಸೆಂಟರ್, 50 ಲಕ್ಷ ರೂ. ವೆಚ್ಚದಲ್ಲಿ ಅಪೌಷ್ಠಿಕ ಮಕ್ಕಳ ಪುನಶ್ಚೇತನ ಕೇಂದ್ರ, 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜ್, 1.38 ಕೋಟಿ ರೂ. ವೆಚ್ಚದಲ್ಲಿ ನೂತನ ಕಣ್ಣಿನ ಶಸ್ತ್ರಚಿಕಿತ್ಸಾಗಾರ ಮತ್ತು ವಾರ್ಡ್, 20 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 42 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ಬಿ.ಯು ಲೋಕಾರ್ಪಣೆಯಾಗಿ ಈಗಾಗಲೇ ಕಾರ್ಯಾರಂಭಗೊಂಡಿವೆ.
 100 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸಲಾಗಿದ್ದು, 131.90 ಕೋಟಿ ರೂ. ವೆಚ್ಚದಲ್ಲಿ ನೂತನ 300 ಹಾಸಿಗೆಯ ಜಿಲ್ಲಾಸ್ಪತ್ರೆಯ ಹೊಸ ಕಟ್ಟಡವನ್ನು ನಿರ್ಮಿಸಲು ಈಗಾಗಲೇ ಕಾಮಗಾರಿ ಪ್ರಾರಂಭಿಸಲಾಗಿದೆ.

 ಜಿಲ್ಲೆಯ 11 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಯಂ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿರುವ ವಸತಿ ರಹಿತ ನೌಕರರುಗಳಿಗೆ ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ಒಟ್ಟು 176 ಮನೆಗಳು ಅನುಮೋದನೆಗೊಂಡಿದೆ. ಪ್ರತಿ ಮನೆಗೆ ಘಟಕ ವೆಚ್ಚ 7.50ಲಕ್ಷ ರೂ. ಅಂದಾಜಿಸಲಾಗಿದ್ದು, ರಾಜ್ಯ ಸರ್ಕಾರದಿಂದ 6ಲಕ್ಷ ರೂ.ಗಳನ್ನು ಭರಿಸಲಾಗುತ್ತದೆ.
 ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ಈವರೆವಿಗೂ 166 ಮನೆಗಳು ಪೂರ್ಣಗೊಂಡಿದ್ದು, ಉಳಿದ 10 ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

 ತುಮಕೂರು ಮಹಾನಗರಪಾಲಿಕೆ ಒಳಗೊಂಡಂತೆ ಜಿಲ್ಲೆಯ ಒಟ್ಟು 11 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಸತಿ ನಿವೇಶನ ರಹಿತರಿಗೆ ಶಾಶ್ವತ ಸೂರು ಕಲ್ಪಿಸಿಕೊಡಲು ವಿವಿಧ ಸರ್ವೇ ನಂಬರ್‍ಗಳಲ್ಲಿ ಒಟ್ಟಾರೆ 192 ಎಕರೆ ಪ್ರದೇಶವನ್ನು ಈಗಾಗಲೇ ಗುರುತಿಸಲಾಗಿದ್ದು, ನಗರ ಆಶ್ರಯ ಸಮಿತಿಯ ಮೂಲಕ ನಿವೇಶನ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲೆ ಐತಿಹಾಸಿಕ, ಪಾರಂಪರಿಕ ನಾಡು. ಅಲ್ಲದೆ, ಕಲೆ, ಸಂಸ್ಕøತಿಗಳ ಬೀಡೂ ಹೌದು. ಸರ್ಕಾರದ ವತಿಯಿಂದ ಕಳೆದ ಎರಡು ವರ್ಷಗಳು ನಾಡ ಹಬ್ಬ ದಸರಾ ಉತ್ಸವವನ್ನು ಐತಿಹಾಸಿಕ ಮೈಸೂರಿನ ದಸರಾ ಉತ್ಸವಕ್ಕೆ ಸರಿಸಮಾನವಾಗಿ ನಡೆಸಿ ಯಶಸ್ವಿಯಾಗಿದ್ದೇವೆ. ಈ ಯಶಸ್ವಿಯಲ್ಲಿ ತಾವೆಲ್ಲರೂ ಭಾಗಿಗಳು ಎಂದು ಹೇಳಲು ನಾನು ಹೆಮ್ಮೆಪಡುತ್ತೇನೆ. ಜಿಲ್ಲೆ ಹಾಗೂ ನಾಡಿನ ಸಮಸ್ತ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಬಾರಿಯೂ ದಸರಾ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
ಈ ದೇಶದ ಸಂಪತ್ತು ಯುವ ಸಮುದಾಯ ಎಂದು ನಂಬಿರುವವನು ನಾನು. ಯುವ ಜನತೆ ಸದೃಢಗೊಳ್ಳಬೇಕು. ಬಲಿಷ್ಠ ಭಾರತದ ನಿರ್ಮಾಣಕ್ಕೆ ಸಜ್ಜುಗೊಳ್ಳಬೇಕು ಎಂಬ ಸ್ವಾಮಿ ವಿವೇಕಾನಂದರ ಮಾತಿನಲ್ಲಿ ವಿಶ್ವಾಸ ಇರುವವನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ಕ್ರೀಡಾಕೂಟ, ರಾಷ್ಟ್ರ ಮಟ್ಟದ ಅಥ್ಲೆಟಿಕ್ ಯು-20 ಕ್ರೀಡಾಕೂಟ, ಅಂತಾರಾಷ್ಟ್ರೀಯ ಮಟ್ಟದ ಟೆನಿಸ್ ಕ್ರೀಡಾಕೂಟ, ಅಂತರ ಜಿಲ್ಲಾ ಮಟ್ಟದ ಫುಟ್‍ಬಾಲ್ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ.

 ಕೊರಟಗೆರೆ ತಾಲ್ಲೂಕು ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಮತ್ತು ವಿವಿಧ ಕ್ರೀಡಾ ಅಂಕಣಗಳ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದ್ದು, ಮಧುಗಿರಿ ತಾಲ್ಲೂಕಿನ ರಾಜೀವ್ ಗಾಂಧಿ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾ ಅಂಕಣಗಳ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.
 ತಿಪಟೂರು ತಾಲ್ಲೂಕು ಕಲ್ಪತರು ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
 ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ವಾಣಿಜ್ಯ ಸಂಕೀರ್ಣದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಶೂಟಿಂಗ್ ಕೇಂದ್ರವನ್ನು ಸ್ಥಾಪಿಸಲಾಗಿದೆ.

 ಶಿರಾ ತಾಲ್ಲೂಕಿನ ವಿವೇಕಾನಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುತ್ತದೆ.

 ತುಮಕೂರಿನಲ್ಲಿ ಕ್ರೀಡಾಕೂಟವನ್ನು ಆಯೋಜನೆ ಮಾಡುವುದು ಮಾತ್ರವಲ್ಲದೇ ಬಾಕ್ಸಿಂಗ್ ಒಳಾಂಗಣ, ಶೂಟಿಂಗ್, ವಾಲಿಬಾಲ್, ಬಾಸ್ಕೆಟ್ ಬಾಲ್ ಹಾಗೂ ಟೆನಿಸ್ ಕ್ರೀಡಾ ಅಂಕಣ ಸೇರಿದಂತೆ ನೂತನ ಕ್ರೀಡಾ ಅಂಕಣಗಳನ್ನು ನಿರ್ಮಾಣ ಮಾಡಲಾಗಿದೆ.

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಿಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ. ಜನರ ಆಶಯಕ್ಕೆ ತಕ್ಕಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕೆಲಸ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಶಿಕ್ಷಣ, ಕ್ರೀಡೆ, ಸಂಸ್ಕøತಿ, ಕೈಗಾರಿಕೆ, ಯುವಕರಿಗೆ ಉದ್ಯೋಗ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆ ಸರ್ಕಾರದೊಂದಿಗೆ ಕೈಜೋಡಿಸಬೇಕು. ಜಿಲ್ಲೆಯನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವಲ್ಲಿ ಎಲ್ಲರ ಸಹಕಾರ ನಮ್ಮೊಂದಿಗಿರುತ್ತದೆ ಎಂದು ಆಶಿಸುತ್ತೇನೆ.
ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ, ದೇಶಕ್ಕೆ ಅತ್ಯುತ್ತಮ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ದೇಶದ ಎಲ್ಲ ಮಹಾನ್ ನಾಯಕರನ್ನು ನೆನೆಯುತ್ತ ಮತ್ತೊಮ್ಮೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ ನನ್ನ ಮಾತುಗಳನ್ನು ಮುಗಿಸುತ್ತೇನೆ ಎಂದರು.

 

Leave a Reply

Your email address will not be published. Required fields are marked *