ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ
ತುಮಕೂರು(ಕ.ವಾ.)ಆ.24: ಪಾವಗಡ ತಾಲ್ಲೂಕು ಕೃಷಿ ಇಲಾಖೆ ವತಿಯಿಂದ ಕೃಷಿ ಪಂಡಿತ, ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತ ಮತ್ತು ರೈತ ಮಹಿಳೆಯರು ಕೃಷಿ ಪಂಡಿತ ಮತ್ತು ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ)ಗೆ ಞ-ಞisಚಿಟಿ ಠಿoಡಿಣಚಿಟನಡಿ ಖSಏ ಟogiಟಿ ಅಥವಾ ಛಿiಣizeಟಿ ಟogiಟಿ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ನಾಗರಿಕ ಸೇವಾ ಕೇಂದ್ರದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಈIಆ(ಈಖUIಖಿS Iಆ) ಸಂಖ್ಯೆಯನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತಾಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಮಾಡುತ್ತಿರುವ ಆಸಕ್ತ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಸಲ್ಲಿಸಬಹುದಾಗಿದೆ ಎಂದು ಪಾವಗಡ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
