ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗೆ ಮೂವರು ಶಿಕ್ಷಕರು ಆಯ್ಕೆ
ಪಾವಗಡ: 2026 2027 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಳು ಗುರುವಾರ ಪ್ರಕಟಗೊಂಡಿದ್ದು

1. ಕಿರಿಯ ಪ್ರಾಥಮಿಕ ಪಾಠಶಾಲೆಯ ವಿಭಾಗದಲ್ಲಿ ಪಟ್ಟಣದ ಶನಿಮಹಾತ್ಮ ದೇವಸ್ಥಾನದ ಹಿಂಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಆದಿ ಲಕ್ಷ್ಮಮ್ಮ,

2. ಹಿರಿಯ ಪ್ರಾಥಮಿಕ ಶಾಲೆ ವಿಭಾಗದಲ್ಲಿ ಕಣಿವೆನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ನಾರಾಯಣಪ್ಪ,

3. ಪ್ರೌಢಶಾಲಾ ವಿಭಾಗದದಲ್ಲಿ ಕೊಡಮಡಗು ಗ್ರಾಮದ ದೈಹಿಕ ಶಿಕ್ಷಕಿ ವಿಮಲಾ ಆರ್ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 5 ರಂದು ಪಟ್ಟಣದ ಗುರುಕುಲ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು.
ಎಂದು ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಮಾಧವರೆಡ್ಡಿ ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಜ: ಶ್ರೀನಿವಾಸಲು ಎ
