ChatGPT Image Oct 4 2026 11 33 17 AM e1791094010128

Karnataka : ಬರ ಪರಿಹಾರಕ್ಕೆ ₹7,142.64 ಕೋಟಿ: ಕೇಂದ್ರಕ್ಕೆ ರಾಜ್ಯದ ಮನವಿ….!

Genaral National - ಕನ್ನಡ STATE

ಬರ ಪರಿಹಾರಕ್ಕೆ ₹7,142.64 ಕೋಟಿ: ಕೇಂದ್ರಕ್ಕೆ  ರಾಜ್ಯದ ಮನವಿ

ರಾಜ್ಯದಲ್ಲಿ ₹46,324.50 ಕೋಟಿ ನಷ್ಟ ಅಂದಾಜು; 217 ತಾಲ್ಲೂಕುಗಳು ಬರಪೀಡಿತ
ಮೂರು ದಿನ ರಾಜ್ಯ ಪ್ರವಾಸ ಕೈಗೊಂಡು ವಸ್ತುನಿಷ್ಠ ವರದಿ ಸಲ್ಲಿಸುವುದಾಗಿ ಕೇಂದ್ರ ತಂಡದ ಭರವಸೆ

ಬೆಂಗಳೂರು, ಅ.3: ಕರ್ನಾಟಕದ ಬರ ಪರಿಸ್ಥಿತಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನದಂಡಗಳ ಅನ್ವಯ ₹7,142.64 ಕೋಟಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಅಂತರ್ ಸಚಿವಾಲಯ ತಂಡದೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಹಾಗೂ ನಷ್ಟದ ಕುರಿತು ಮುಖ್ಯಮಂತ್ರಿ ವಿವರಿಸಿದರು.

ರಾಜ್ಯದಲ್ಲಿ ಬರದಿಂದ ಒಟ್ಟು ₹46,324.50 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ₹3,701 ಕೋಟಿ ಪರಿಹಾರಕ್ಕೆ ಮನವಿ ಮಾಡಲಾಗಿತ್ತು. ಪರಿಷ್ಕೃತ ಅಂದಾಜಿನಂತೆ ಹೆಚ್ಚುವರಿಯಾಗಿ ₹3,437.34 ಕೋಟಿ ಸೇರಿಸಿ ಒಟ್ಟು ₹7,142.64 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ.

ರಾಜ್ಯದ 240 ತಾಲ್ಲೂಕುಗಳ ಪೈಕಿ 217 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರೈತರು ಕಂಗಾಲಾದರೆ ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ಧಾವಿಸಬೇಕು ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಇದೇ ವೇಳೆ, ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಅವರು ಮೂರು ದಿನ ರಾಜ್ಯ ಪ್ರವಾಸ ಕೈಗೊಂಡು ವಸ್ತುಸ್ಥಿತಿ ಪರಿಶೀಲಿಸುವುದರ ಜೊತೆಗೆ ರಾಜ್ಯ ಸರ್ಕಾರದಿಂದ ಅಗತ್ಯ ದತ್ತಾಂಶ ಪಡೆದು ವಸ್ತುನಿಷ್ಠ ವರದಿ ಸಲ್ಲಿಸುವುದಾಗಿ ಭರವಸೆ ನೀಡಿದರು.

 

Chief Minister D.K. Shivakumar held discussions on Saturday with a Central Inter Ministerial Team led by Ajit Kumar Sahu 5217 ತಾಲೂಕುಗಳು ಬರಪೀಡಿತ; 177 ತಾಲೂಕುಗಳಲ್ಲಿ ₹46,324.50 ಕೋಟಿ ಬೆಳೆ ನಷ್ಟದ ಅಂದಾಜು
ವಸ್ತುನಿಷ್ಠ ಮೌಲ್ಯಮಾಪನ ನಡೆಸಿ ರೈತರು ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ತ್ವರಿತ ನೆರವು ನೀಡುವಂತೆ ಮನವಿ

ಕರ್ನಾಟಕ ತೀವ್ರ ಬರ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಿ ಸಕಾಲದಲ್ಲಿ ಕೇಂದ್ರದ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ ಅವರು ಅಂತರ್‌-ಸಚಿವಾಲಯದ ಕೇಂದ್ರ ತಂಡಕ್ಕೆ (IMCT) ಮನವಿ ಮಾಡಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ‘ಕೃಷ್ಣ’ದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೌಲ್ಯಮಾಪನಗೊಂಡ 177 ತಾಲೂಕುಗಳಲ್ಲಿ ಸುಮಾರು 47.09 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹46,324.50 ಕೋಟಿ ಆರ್ಥಿಕ ನಷ್ಟ ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಎನ್‌ಡಿಆರ್‌ಎಫ್‌ ಅಡಿಯಲ್ಲಿ ಎರಡು ಹಂತಗಳಲ್ಲಿ ಒಟ್ಟು ₹7,142.64 ಕೋಟಿ ನೆರವು ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಮೊದಲ ಹಂತದಲ್ಲಿ 101 ತಾಲೂಕುಗಳಿಗೆ ₹3,705.30 ಕೋಟಿ ಹಾಗೂ ಹೆಚ್ಚುವರಿ 76 ತಾಲೂಕುಗಳಿಗೆ ₹3,437.34 ಕೋಟಿ ನೆರವು ಕೋರಲಾಗಿದೆ ಎಂದು ಪರಮೇಶ್ವರ ಹೇಳಿದರು.

ಕೇಂದ್ರದ ಬರ ನಿರ್ವಹಣಾ ಕೈಪಿಡಿಯಲ್ಲಿನ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಯೇ ಬರಪೀಡಿತ ತಾಲೂಕುಗಳನ್ನು ಗುರುತಿಸಲಾಗಿದೆ. ಅಂತಿಮ ಮೌಲ್ಯಮಾಪನದಲ್ಲಿ ಹೆಚ್ಚುವರಿ 40 ತಾಲೂಕುಗಳು ಹಾಗೂ ನಂತರ ಪತ್ತೆಯಾಗುವ ಬೆಳೆ ಹಾನಿಯನ್ನೂ ಪರಿಗಣಿಸಬೇಕು ಎಂದು ಕೇಂದ್ರ ತಂಡವನ್ನು ಅವರು ಒತ್ತಾಯಿಸಿದರು.

2026ರ ನೈಋತ್ಯ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಶೇ.35ರಷ್ಟು ಮಳೆಯ ಕೊರತೆ ದಾಖಲಾಗಿದ್ದು, 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳಲ್ಲಿ ಹಾಗೂ 240 ತಾಲೂಕುಗಳ ಪೈಕಿ 209 ತಾಲೂಕುಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಸಂಪೂರ್ಣ ಮೌಲ್ಯಮಾಪನ ಪೂರ್ಣಗೊಂಡ ಬಳಿಕ ಬರದಿಂದ ಬಾಧಿತ ಬೆಳೆ ಪ್ರದೇಶ ಸುಮಾರು 55 ಲಕ್ಷ ಹೆಕ್ಟೇರ್‌ಗೆ ತಲುಪಬಹುದು ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.

ಬರದಿಂದ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದ್ದು, ಸದ್ಯ 227 ಟ್ಯಾಂಕರ್‌ಗಳು ಮತ್ತು 720 ಬಾಡಿಗೆ ಕೊಳವೆಬಾವಿಗಳ ಮೂಲಕ 861 ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತಿದೆ. ಮುಂಬರುವ ತಿಂಗಳುಗಳಲ್ಲಿ 2,300ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳು ನೀರಿನ ಸಮಸ್ಯೆ ಎದುರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ₹306 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಬಾಧಿತ ರೈತರಿಗೆ ತಲಾ ₹2,500 ತಕ್ಷಣದ ಇನ್‌ಪುಟ್‌ ಸಬ್ಸಿಡಿ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಬೆಳೆ ವಿಮೆ ಪರಿಹಾರವನ್ನು ತ್ವರಿತವಾಗಿ ಪಾವತಿಸುವುದು ಹಾಗೂ ಬರಪೀಡಿತ ರೈತರಿಗೆ ಸಾಲ ಮರುಹೊಂದಾಣಿಕೆ ಸೇರಿದಂತೆ ಅಗತ್ಯ ಆರ್ಥಿಕ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ತಂಡಕ್ಕೆ ಮನವಿ ಮಾಡಲಾಗಿದೆ.

“ನಾವು ಹೆಚ್ಚುವರಿಯಾಗಿ ಏನನ್ನೂ ಕೇಳುತ್ತಿಲ್ಲ. ವಾಸ್ತವ ಪರಿಸ್ಥಿತಿಯ ನ್ಯಾಯಯುತ ಮೌಲ್ಯಮಾಪನ ನಡೆಸಿ, ರಾಜ್ಯಕ್ಕೆ ಸಲ್ಲಬೇಕಾದ ನೆರವು ಸಕಾಲದಲ್ಲಿ ದೊರೆಯುವಂತೆ ಸಹಕರಿಸಬೇಕು” ಎಂದು ಡಾ. ಜಿ. ಪರಮೇಶ್ವರ ಮನವಿ ಮಾಡಿದರು

Leave a Reply

Your email address will not be published. Required fields are marked *