ಕೊರೋನಾ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ..
ನವ ದೆಹಲಿ: ಕೊರೊನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದಾರೆ,
ನವದೆಹಲಿ ಯ ಏಮ್ಸ್ ಆಸ್ಪತ್ರೆ ಯಲ್ಲಿ ಕೊರೋನಾ ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದುಂದ ಸಂಸದರಾಗಿದ್ದ ನಾಲ್ಕುಬಾರಿ ಆಯ್ಕೆಯಾಗಿದ್ದ ,ಸುರೇಶ್ ಅಂಗಡಿ. ಅವರು ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮೊದಲಬಾರಿಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದರು.
ಸಂಸದರ ನಿಧನಕ್ಕೆ ಪ್ರಧಾನಿಗಳು ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯ ಬಿಜೆಪಿ ದೊಡ್ಡ ಆಘಾತವಾಗಿದೆ. ಕೆಲ ದಿನಗಳ ಹಿಂದೆ ರಾಜ್ಯಸಭಾ ಸಂಸದ ಅಶೋಕ್ ಗಸ್ತಿ ಸಹ ಕೊರೊನಾಗೆ ಬಲಿಯಾಗಿದ್ದರು.