file 00000000c7d48208a88fa52e2db8df1f 200kb

ವಿಧಾನ ಪರಿಷತ್ ಚುನಾವಣೆ:: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ NDA ಅಭ್ಯರ್ಥಿ ಗೆಲವು….!

POLATICAL STATE

*ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು*

ಬೆಂಗಳೂರು ನಗರ ಜಿಲ್ಲೆ, ಅ.27, (ಕರ್ನಾಟಕ ವಾರ್ತೆ): ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿ ಎ.ಪಿ ರಂಗನಾಥ್ ಅವರು ಚುನಾಯಿತರಾಗಿರುತ್ತಾರೆಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

ಅಕ್ಟೋಬರ್ 23 ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದರು.

ಇಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದ್ದು, ಮೊದಲನೆಯ ಪ್ರಾಶಸ್ಯದ ಮತ ಎಣಿಕೆ ಅಂತ್ಯದಲ್ಲಿ
ಎ.ಪಿ. ರಂಗನಾಥ್ ಅವರು 10810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎ.ಪಿ. ರಂಗನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪುಟ್ಟಣ್ಣನವರಿಂದ 908 ಅಂತರದ ಮುನ್ನಡೆಯನ್ನು ಪಡೆದು ಚುನಾಯಿತರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪುಟ್ಟಣ್ಣ ಅವರು 9902,
ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿಯಾದ
ಡಾ. ಜಿ.ಆರ್. ಹೆಬ್ಬೂರು 94 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಉಮೇಶ್ ಬಾಬು ಪಿಳ್ಳೆಗೌಡ 215 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಬಿ .ಎಸ್. ನಾಗರಾಜು 11 ಹಾಗೂ ಪಕ್ಷೇತರ ಅಭ್ಯರ್ಥಿಯಾದ ಡಾ. ಎನ್. ಲಕ್ಷ್ಮಣ ಸ್ವಾಮಿ ಅವರು 24 ಮತಗಳನ್ನು ಪಡೆದಿದ್ದಾರೆ.

ಒಟ್ಟು 21056 ಮತಗಳು ಮಾನ್ಯವಾಗಿದ್ದು, 1857 ಮತಗಳು ತಿರಸ್ಕೃತಗೊಂಡಿದೆ ಎಂದು ಬಿಸ್ವಾಸ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *