IMG 20261028 WA0038 scaled

ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚಿಸಿ….!

Genaral STATE

 

*ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚಿಸಿ, ಫಲಾನುಭವಿಗಳ ಜೊತೆ ಸಂಪರ್ಕ ಬೆಳೆಸಿ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ*

*ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಶ್ಬೋರ್ಡ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಸಿಎಂ ಚಾಲನೆ*

*ಗ್ಯಾರಂಟಿ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಿ*

*ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ*

*ಬೆಂಗಳೂರು, ಅ.28:*”ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಪಂಚಾಯಿತಿ ಮಟ್ಟದಲ್ಲಿಯೂ ರಚಿಸಲಾಗುತ್ತಿದ್ದು, ಈ ಸಮಿತಿಗಳ ಸದಸ್ಯರು ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರಿಯಾಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸೂಚಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಡ್ಯಾಶ್ಬೋರ್ಡ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಚಾಲನೆ ನೀಡಿ ಮಾತನಾಡಿದರು.

*ಗ್ಯಾರಂಟಿ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಿ*

“ಗ್ಯಾರಂಟ ಯೋಜನೆಗಳ ಸಾಮಾಜಿಕ ಜಾಲತಾಣಗಳಲ್ಲಿ ಕಾಲಕಾಲಕ್ಕೆ ಮಾಹಿತಿಗಳು, ಫಲಾನುಭವಿಗಳ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಈ ಯೋಜನೆಗಳ ಕುರಿತ ಅಪಪ್ರಚಾರಕ್ಕೆ ಕಡಿವಾಣ ಹಾಕಬೇಕು” ಎಂದು ಸೂಚಿಸಿದರು.

*ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ*

“ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸದಸ್ಯರು ಪ್ರತಿ ಫಲಾನುಭವಿಯ ಮನೆಗೆ ಭೇಟಿ ನೀಡಿ, “ಗ್ಯಾರಂಟಿ ಮನೆ” ಸ್ಟಿಕರ್‌ ಹಾಕಬೇಕು. ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ಸರ್ಕಾರ ನೀಡುವ ಅನುಕೂಲಗಳನ್ನು ಮನವರಿಕೆ ಮಾಡಿ. ಸಾಮಾಜಿಕ ಜಾಲತಾಣಗಳನ್ನು ಎಲ್ಲ ಹಂತಗಳಲ್ಲಿ ಪರಿಣಾಮಕಾರಿಯಾಗಿ ಬಳಸಿ” ಎಂದು ತಿಳಿಸಿದರು.

“ಗ್ಯಾರಂಟಿ ಅನುಷ್ಠಾನ ಡ್ಯಾಶ್ಬೋರ್ಡ್

https://gsdashboard.karnataka.gov.in/ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಮಾಡಿರುವ ವೆಚ್ಚದ ಬಗ್ಗೆ ಜಿಲ್ಲಾವಾರು ಹಾಗೂ ತಾಲ್ಲೂಕುವಾರು ಮಾಹಿತಿ ಲಭ್ಯವಿದೆ. ಇದರೊಂದಿಗೆ ಗ್ಯಾರಂಟಿ ಯೋಜನೆಗಳ ಕುರಿತ ಸರ್ಕಾರಿ ಆದೇಶಗಳು, ಅಧಿಕಾರಿಗಳ ಸಂಪರ್ಕ ಮಾಹಿತಿ ಮೊದಲಾದವುಗಳು ಲಭ್ಯವಿದೆ. ಅಲ್ಲದೆ, ಯಶೋಗಾಥೆಗಳ ಭಂಡಾರವೂ ಲಭ್ಯವಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಅಭಿಪ್ರಾಯ ಹಂಚಿಕೊಳ್ಳುವ ಗ್ಯಾರಂಟಿ ಕಟ್ಟೆ ಎಂಬ ವೇದಿಕೆಯನ್ನೂ ಸೃಜಿಸಲಾಗುವುದು” ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್. ಎಂ. ರೇವಣ್ಣ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷ ಪಿ. ಟಿ. ಪರಮೇಶ್ವರ ನಾಯ್ಕ, ದಿನೇಶ್ ಗೂಳಿಗೌಡ, ಮೆಹರೋಜ್ ಖಾನ್, ಜಿಬಿಎ ವ್ಯಾಪ್ತಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ ಕೃಷ್ಣಪ್ಪ, ಸಿಎಂ ಸಂವಹನ ಸಲಹೆಗಾರ ದೀಪಕ್ ತಿಮ್ಮಯ, ಇ- ಆಡಳಿತ ಕೇಂದ್ರದ ಸಿಇಒ ಭೂ ಬಾಲನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *