ಪಾವಗಡದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚಿತ್ತಯ್ಯ ಎಚ್. ನೇಮಕ
ಬಡ್ತಿ ಬಳಿಕ ಪಾವಗಡಕ್ಕೆ ವರ್ಗಾವಣೆ; ಶುಕ್ರವಾರ ಅಧಿಕಾರ ಸ್ವೀಕಾರ
ಪಾವಗಡ: ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚಿತ್ತಯ್ಯ ಎಚ್. ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಮಧುಗಿರಿ ಡಿಡಿಪಿಐ ಕಚೇರಿಯಲ್ಲಿ ಕನ್ನಡ ವಿಷಯ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಬಡ್ತಿ ಪಡೆದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಸಿಟಿಇ) ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಗುರುವಾರ ಪಾವಗಡ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ಅವರು, ಶುಕ್ರವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಸಪ್ತಸ್ವರ ನ್ಯೂಸ್ | ಪಾವಗಡ
