IMG 20201007 WA0013

R R ನಗರ ಉಪಚುನಾವಣೆ: ‘ ಕೈ ‘ ಅಭ್ಯರ್ಥಿಯಾಗಿ ಕುಸುಮ…!

STATE POLATICAL

R R ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮ ಹೆಚ್  ಕಿರು ಪರಿಚಯ*

ಬೆಂಗಳೂರು: –  ಸಮಾಜ ಸೇವೆ ಹಾಗೂ ರಾಜಕೀಯ ಒಂದೇ ನಾಣ್ಯದ ಎರಡು ಮುಖಗಳು. ಆ ನಾಣ್ಯದ ಪರ್ಯಾಯ ಪದವಾಗಲು ರಾಜಕೀಯ ರಂಗಕ್ಕೆ ಧುಮುಕಿರುವ ಕುಸುಮಾ ಎಚ್ ಅವರು ಇದೀಗ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.

ಸುಶಿಕ್ಷಿತ ಯುವಸಮುದಾಯ ರಾಜಕೀಯಕ್ಕೆ ಬರಬೇಕು, ಅವರಿಂದ ಬದಲಾವಣೆ, ಸಮಾಜದ ಸುಧಾರಣೆ ಸಾಧ್ಯ ಎಂಬ ಮಾತು ಪದೇಪದೇ ಕೇಳಿಬರುತ್ತದೆ. ಕುಸುಮಾ ಅವರು ಈ ಮಾತಿಗೆ ಅನ್ವರ್ಥವಾಗಿದ್ದಾರೆ.

ಯುವ, ವಿದ್ಯಾವಂತ, ಶಿಕ್ಷಣ ಹಾಗೂ ಸಮಾಜ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕುಸುಮಾ ಅವರು ಸಮಾಜ ಸುಧಾರಣೆಗೆ ಆಧುನಿಕ ಚಿಂತನೆ ಉಳ್ಳವರು. ರಾಜಕೀಯ ರಂಗದಲ್ಲಿ ಏನಾದರೂ ಸಾಧಿಸಬೇಕೆಂಬ ಹಂಬಲ ಹೊಂದಿರುವರು. ರಾಜಕೀಯ ಹಿನ್ನೆಲೆ ಇರುವ ಕುಟುಂಬದಿಂದ ಬಂದಿರುವುದು ಅವರಿಗೆ ಪ್ಲಸ್ ಪಾಯಿಂಟ್.

IMG 20201007 WA0011

ಬೆಂಗಳೂರಿನಲ್ಲಿ 1989ರ ಜೂನ್ 6 ರಂದು ಜನಿಸಿದ ಕುಸುಮಾ ಅವರು ಜಾತ್ಯಾತೀತ ಜನತಾದಳ ಮುಖಂಡರಾದ ಹನುಮಂತರಾಯಪ್ಪ ಅವರ ಪುತ್ರಿ. 2010ರಲ್ಲಿ ಡಾ.ಅಂಬೇಡ್ಕರ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದ ಕುಸುಮಾ ಅವರು, 2018ರಲ್ಲಿ ಯೂನಿವರ್ಸಿಟಿ ಆಫ್ ಮ್ಯಾಸಚೂಸೆಟ್ಸ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎಸ್) ಪದವಿ ಪಡೆದಿದ್ದಾರೆ.

ಬೆಂಗಳೂರಿನ ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು 2016ರಿಂದ ‘ನಿರಾಂತಕ’ ಸ್ವಯಂ ಸೇವಾ ಸಂಸ್ಥೆಯಲ್ಲಿ ಪ್ರವರ್ತಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

IMG 20201007 WA0014

ಸಮಾಜ ಸೇವೆಯ ಜತೆಗೆ ಓದು, ಬರವಣಿಗೆಯಂತಹ ಹವ್ಯಾಸಗಳು ಕುಸುಮಾ ಅವರದ್ದಾಗಿದೆ.

ನಿರಾತಂಕ ಸ್ವಯಂ ಸೇವಾ ಸಂಘದಲ್ಲಿ ನೊಂದ ವೃದ್ಧರಿಗೆ ಮತ್ತು ಮಹಿಳೆಯರ ಪರವಾಗಿ ಕಾರ್ಯ ನಿರ್ವಹಿಸಿರುವ ಕುಸುಮಾ ಅವರು ಈಗ ರಾಜಕೀಯ ಪ್ರವೇಶಿಸಿ ಜನ ಸೇವೆಗೆ ಮುಂದಾಗಿದ್ದಾರೆ. ಚುನಾವಣಾ ಕಣದಲ್ಲಿ ಆ ಸೇವೆಯ ಮತ್ತೊಂದು ಮೆಟ್ಟಿಲು ಏರಲು ಉತ್ಸುಕರಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ R R ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ  ಅಖಾಡಕ್ಕೆ ಇಳಿಯುತ್ತಿದ್ದಾರೆ.