IMG 20201008 134600

ಉಪ ಚುನಾವಣೆ: ಸ್ಟಾರ್ ಪ್ರಚಾರಕರಿಗೆ ಹೊಸ ನಿಯಮ….!

National - ಕನ್ನಡ

ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಕುರಿತು ಪರಿಷ್ಕøತ ಆದೇಶ

ಬೆಂಗಳೂರು, ಅಕ್ಟೋಬರ್ 08 (ಕರ್ನಾಟಕ ವಾರ್ತೆ):
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಮಿತಿಗೊಳಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಭಾರತ ಚುನಾವಣಾ ಆಯೋಗವು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಲಾಗಿತ್ತು. ಆದರೆ, ಈ ಸಂಖ್ಯೆಯಲ್ಲಿ ಬದಲಾವಣೆ ಮಾಡಿ 30 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದೇ ರೀತಿಯಲ್ಲಿ ನೊಂದಾಯಿತ ರಾಜಕೀಯ ಪಕ್ಷಗಳಿಗೆ ನೀಡಲಾಗಿದ್ದ 20 ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು 15ಕ್ಕೆ ಇಳಿಸಿ ಪರಿಷ್ಕøತ ಆದೇಶವನ್ನು ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ ಘೋಷಣೆಯಾಗಿರುವ ವಿಧಾನ ಸಭಾ ಉಪ ಚುನಾವಣೆಗಳಿಗೆ ಈ ಪರಿಷ್ಕøತ ಆದೇಶ ಅನ್ವಯವಾಗಲಿದ್ದು, ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರ ಸಭೆಗಳ ಕುರಿತು ಮುಖ್ಯ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಲು ಚುನಾವಣೆ ಅಧಿಸೂಚನೆಯ ದಿನಾಂಕದಿಂದ ಇದ್ದ ಒಂದು ವಾರದ ಗಡುವನ್ನು 10 ದಿನಗಳಿಗೆ ವಿಸ್ತರಿಸಲಾಗಿದೆ.
ಸ್ಟಾರ್ ಪ್ರಚಾರಕರ ಸಭೆಗಳಿಗೆ ಕನಿಷ್ಠ 48 ಗಂಟೆಗಳ ಮುಂಚೆ ಅನುಮತಿಗಾಗಿ ರಾಜಕೀಯ ಪಕ್ಷಗಳು ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.