IMG 20201029 WA0003

ವಾರ್ತಾ ಇಲಾಖೆ ಜಂಟಿ ನಿರ್ದೇಶಕರಿಗೆ ಆತ್ಮೀಯ ಬೀಳ್ಕೊಡುಗೆ….!  

ಬೆಂಗಳೂರು DISTRICT NEWS

ಬೆಂಗಳೂರು:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಜಂಟಿ ನಿರ್ದೇಶಕರಾಗಿ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಹೊಂದಿದ ಎ. ಆರ್. ಪ್ರಕಾಶ್ ಅವರಿಗೆ ಇಲಾಖೆಯಲ್ಲಿ ಇಂದು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಜಂಟಿ ನಿರ್ದೇಶಕರಾದ ಡಿ.ಪಿ.ಮುರಳೀಧರ್, ಇಲಾಖೆಯ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
ಇವರು ಕಳೆದ 30 ವರ್ಷಗಳಲ್ಲಿ ಹೊಸಪೇಟೆ, ಕಲಬುರಗಿ, ಮೈಸೂರು ಮತ್ತು ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.