ಶ್ರೀ ಕ್ಷೇತ್ರ ಶಬರಿಮಲೈಗೆ ತೆರಳುವ ಭಕ್ತಾಧಿಗಳಿಗೆ ಕೇರಳ ಸರ್ಕಾರದ ಮಾರ್ಗಸೂಚಿ
ಬೆಂಗಳೂರು, ನವೆಂಬರ್ 6 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯದಿಂದ ಕೇರಳ ರಾಜ್ಯದ ಶ್ರೀಕ್ಷೇತ್ರ ಶಬರಿಮಲೈಗೆ ತೆರಳುವ ಭಕ್ತಾಧಿಗಳು/ಯಾತ್ರಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕೇರಳ ಸರ್ಕಾರದಿಂದ ಮಾರ್ಗಸೂಚಿಗಳನ್ನು ಈ ಕೆಳಕಂಡಂತೆ ಹೊರಡಿಸಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಯಾತ್ರಾರ್ಥಿಗಳು https://sabarimalaonline.org/ ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ ಕಡ್ಡಾಯವಾಗಿ ನೋವ್ಮದಣಿ ಮಾಡಿಕೊಂಡಿರುವವರಿಗೆ ಅನುವ್ಮತಿಸಿದ ನಂತರದಲ್ಲಿ ಮಾತ್ರ ಶಬರಿಮಲೈ ದರ್ಶನ್ಕೆ ಅವಕಾಶ ಕಲ್ಪಿಸಲಾಗುವುದು. ಪ್ರಥಮವಾಗಿ ಪ್ರತಿ ದಿನ ಒಂದು ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶವಿದ್ದು, ವ್ರೆದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಭೇಟಿ ನೀಡುವ 48 ಗಂಟೆ ಅವಧಿಯ ಮೊದಲು ಕೋವಿಡ್-19 ಪ್ರಮಾಣ ಪತ್ರ ಹೊಂದಿರುವ್ಯದು ಕಡ್ಡಾಯ. ಪ್ರವೇಶ ಸ್ಥಳದಲ್ಲಿ ಆಚಿಟಿಜೆನ್ ಟೆಸ್ಟ್‍ಗೆ ಅವಕಾಶ ಕಲ್ಪಿಸಲಾಗಿದ್ದು, ಅದರ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕು.
ಹತ್ತು ವರ್ಷದೊಳಗಿನ ಹಾಗೂ 60 ರಿಂದ 65 ವರ್ಷ ಮೇಲ್ಪಟ್ಟವರಿಗೆ ಹಾಗೂ ಅನಾರೋಗ್ಯದ ಲP್ಪ್ಷಣ ಇರುವವರಿಗೆ ಯಾತ್ರಾ ಪ್ರದೇಶಕ್ಕೆ ಅನುವ್ಮತಿ ಇರುವುದಿಲ್ಲ. ಬಿಪಿಎಲ್, ಆಯುಷ್ಮಾನ್ ಇತರೆ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅದನ್ಮ್ನ ಹೊಂದಿರಬೇಕು.
ತುಪ್ಪದ ಅಭಿಷೇಕ, ಪಂಪಾನದಿ ಸ್ನಾನ, ಸನ್ನಿಧಾನದಲ್ಲಿ ರಾತ್ರಿ ತಂಗುವುದು ಹಾಗೂ ಪಂಪಾ ಮತ್ತು ಗಣಪತಿ ದೇವಸ್ಥಾನಗಳಿಗೆ ಅವಕಾಶವಿರುವುದಿಲ್ಲ. ಯಾತ್ರಾರ್ಥಿಗಳು ಪ್ರಯಾಣಕ್ಕೆ ಎರುಮೆಲು ಮತ್ತು ವೇದಸಾರಿಕ್ಕರ ಮಾರ್ಗದಲ್ಲಿ ಮಾತ್ರ ಅವಕಾಶ ಇರುತ್ತದೆ.