IMG 20201114 WA0015

ಸಹಕಾರ ಸಪ್ತಾಹ ಕ್ಕೆ ಬಿಎಸ್ ವೈ ರಿಂದ ಚಾಲನೆ….!

STATE Genaral

ಜಗತ್ತಿನ ಅತಿದೊಡ್ಡ ಸಹಕಾರ ಸಂಸ್ಥೆ ಹೊಂದಿರುವ ಕೀರ್ತಿ ಭಾರತಕ್ಕೆ ಸಲ್ಲುತ್ತದೆ
-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು, ನವೆಂಬರ್ 14 (ಕರ್ನಾಟಕ ವಾರ್ತೆ): ಭಾರತದ ಸಹಕಾರ ಸಂಸ್ಥೆ ಜಗತ್ತಿನ ಅತ್ಯಂತ ದೊಡ್ಡ ಸಂಸ್ಥೆಯಾಗಿದ್ದು, ಭಾರತದಲ್ಲಿ ಒಟ್ಟು 8 ಲಕ್ಷ ಸಹಕಾರ ಸಂಸ್ಥೆಗಳಿದ್ದು, 28 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ-2020ನ್ನು ಉದ್ಘಾಟಿಸಿ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು ಜಗತ್ತಿಗೆ ಸಹಕಾರ ಕ್ಷೇIMG 20201114 WA0013ತ್ರದಲ್ಲಿ ಭಾರತದ ಕೊಡುಗೆ ಮಹತ್ತರವಾದದ್ದು, ಭಾರತಕ್ಕೆ ಸಹಕಾರ ಕ್ಷೇತ್ರದಲ್ಲಿ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕದಲ್ಲಿ ಇಂದು 45 ಸಾವಿರ ಸಹಕಾರ ಸಂಸ್ಥೆಗಳಿದ್ದು, 2 ಕೋಟಿಗೂ ಹೆಚ್ಚು ಸದಸ್ಯರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಸ್ವಾತಂತ್ರ್ಯಪೂರ್ವದಲ್ಲಿ ಮಹಾತ್ಮಗಾಂಧಿ ಅವರ ಪ್ರೇರಣೆಯಿಂದ ಆರಂಭವಾದ ಸಹಕಾರ ಕ್ಷೇತ್ರ ಇಂದು ಕೃಷಿಯಿಂದಿಡಿದು ಅನೇಕ ಕ್ಷೇತ್ರಗಳಲ್ಲಿ ಯಶಸ್ವಿಯಾಗಿದೆ. ರಾಜ್ಯದ ಸಹಕಾರ ಸಂಸ್ಥೆಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಹೇಳಿದರು.

IMG 20201114 WA0014

ಕೋವಿಡ್-19 ಸಮಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂ.ಗಳನ್ನು ನೀಡಿತ್ತು. ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿಯಲ್ಲಿ ಕೃಷಿ ಕ್ಷೇತ್ರ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆ ಬೆಳೆಸಲು ಕೃಷಿ, ಹಾಲು ಮತ್ತು ಕೃಷಿಯೇತರ ಚಟುವಟಿಕೆಗಳಿಗೆ ಆರ್ಥಿಕ ಸ್ಪಂದನೆ ಮೂಲಕ 39 ಕೋಟಿ ರೂ. ಸಾಲ ನೀಡಲಾಗಿದೆ. ಸಹಕಾರ ಕ್ಷೇತ್ರ ಮತ್ತಷ್ಟು ಬೆಳೆಯಲಿ, ಸಪ್ತಾಹ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ ಅವರು ಸಹಕಾರ ಪ್ರಶಸ್ತಿಗೆ ಭಾಜನರಾದ ಸಹಕಾರ ಕ್ಷೇತ್ರದ ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಹಕಾರ ಕ್ಷೇತ್ರವನ್ನು ವಿಸ್ತರಿಸಲು ಈ ಸಹಕಾರ ಸಪ್ತಾಹ ಸಹಾಯವಾಗಲಿದೆ. ಇಂದು ಇಲ್ಲಿ ಆರಂಭವಾದ ಈ ಸಹಕಾರ ಸಪ್ತಾಹ ಒಟ್ಟು 7 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ನಡೆಯಲಿದ್ದು, ಪ್ರತಿದಿನ ಒಂದೊಂದು ವಿಷಯಗಳನ್ನು ಆಧರಿಸಿ ಆಚರಿಸಲಾಗುವುದು. ಇಂದಿನ ವಿಷಯ “ಕೊರೋನೋತ್ತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ” ಎಂದು ಹೇಳಿದರು.

IMG 20201114 WA0017

ರಾಜ್ಯದಲ್ಲಿ ಕಳೆದ ಕೊರೋನ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮತ್ತು ಜವಬ್ದಾರಿಯನ್ನು ಗೌರವಿಸಿ ಒಟ್ಟು 42,500 ಆಶಾ ಕಾರ್ಯಕರ್ತೆಯರಿಗೆ ತಲಾ ಮೂರು ಸಾವಿರ ಗೌರವ ಧನವನ್ನು ಸಹಕಾರ ಮಂಡಳದಿಂದ ನೀಡಲಾಗಿತ್ತು ಎಂದು ಸ್ಮರಿಸಿಕೊಂಡರು.

ಪ್ರಧಾನ ಮಂತ್ರಿಗಳ ಆತ್ಮ ನಿರ್ಭರದಡಿ ರಾಜ್ಯದ ದುರ್ಬಲರನ್ನು ಆರ್ಥಿಕವಾಗಿ ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯದ ವಿವಿಧ ಕ್ಷೇತ್ರಗಳ ಬಡವರಿಗೆ ಸಹಕಾರ ಸಂಸ್ಥೆಗಳ ಮೂಲಕ 15 ಲಕ್ಷ ಜನರಿಗೆ 15 ಸಾವಿರ ಕೋಟಿ ಸಾಲ ನೀಡಲು ಯೋಜಿಸಲಾಗಿದೆ. ಈಗಗಾಲೇ ಕೇಂದ್ರ ಸರ್ಕಾರದಿಂದ ರಾಜ್ಯದ ಸಹಕಾರ ಕ್ಷೇತ್ರವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ 4,750 ರೂ. ಮೊದಲ ಕಂತಾಗಿ ಬರಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಸೇರಿದಂತೆ ವೇದಿಕೆಯ ಮೇಲಿದ್ದ ಗಣ್ಯರು ಮಹಾಮಂಡಳ ಕಾರ್ಯಚಟುವಟಿಕೆಗಳ ಕೈಪಿಡಿ ಹಾಗೂ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಸೇರಿದಂತೆ ಅನೇಕ ಶಾಸಕರು ಹಾಗೂ ಸಹಕಾರಿ ದುರೀಣರು ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಕಾರ್ಯದರ್ಶಿ ತುಷಾರ್ ರಂಗನಾಥ್ ಅವರು ಸ್ವಾಗತಿಸಿದರು.