ಇತ್ತೀಚೆಗಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಆದೇಶ ಹೊರಡಿಸಿದ್ದ ಸರ್ಕಾರದ ಇದೀಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೂ ಗ್ರೀನ್ ಸಿಗ್ನಲ್ ನೀಡಿದೆ.
ವೀರಶೈವ ಲಿಂಗಾಯತ ಸಮುದಾಯದ ಬಹುದಿನಗಳ ಬೇಡಿಕೆಗೆ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಸ್ಪಂದಿಸಿದೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರು ಹೆಚ್ಚಿನ ಸಂಖ್ಯೆ ಯ ಲ್ಲಿದ್ದು ಇವರಲ್ಲಿ ಆರ್ಥಿಕವಾಗಿ,ಸಾಮಾಜಿಕವಾಗಿ ಹಾಗು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ವರಿದ್ದಾರೆ. ಹೀಗಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ಅಗತ್ಯ ಕ್ರಮಗಳನ್ನು ಕೈಗೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ನಿಗಮ ಸ್ಥಾಪನೆಗೆ ಮಾತ್ರ ಆದೇಶದಲ್ಲಿ ತಿಳಿಸಲಾಗಿದ್ದು, ಅನುದಾನ ದ ವಿಷಯ ಪ್ರಸ್ತಾಪಿಸಿಲ್ಲ.