ಡಿಸೆಂಬರ್ 7 ರಿಂದ 15 ರವರೆಗೆ ಬೆಂಗಳೂರಿನಲ್ಲಿ ವಿಧಾನ ಮಂಡಲದ ಅಧಿವೇಶನ
ಬೆಂಗಳೂರು, ನವೆಂಬರ್ 18 (ಕರ್ನಾಟಕ ವಾರ್ತೆ):
ಡಿಸೆಂಬರ್ 7 ರಿಂದ 15 ರವರೆಗೆ ಕರ್ನಾಟಕ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಇಂದು ಇಲ್ಲಿ ತಿಳಿಸಿದರು. ಅವರು ಸಚಿವರ ಸಂಪುಟ ಸಭೆಯ ನಂತರ ಮಾಧ್ಯಮದವರಿಗೆ ಈ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ಒಪ್ಪಿಗೆ ನೀಡಲಾಯಿತು. ಬೆಳಗಾವಿ ನಗರ ಸಭೆ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಬೆಳಗಾವಿ ನಗರ ಸಭೆಗೆ 28.5 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಯಿತು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ನ್ಯಾಯಮೂತಿ ನಾಗಮೋಹನದಾಸ್ ವರದಿ ನೀಡಿದೆ ಈ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲು ತೀರ್ಮಾನಿಸಲಾಯಿತು. ಪರಿಶಿಷ್ಟ ಜಾತಿ ಜೊತೆಗೆ ಈಗಿರುವ ಶೇ 15 ರಿಂದ 17 ಕ್ಕೆ ಹೆಚ್ಚಳ ಪರಿಶಿಷ್ಠ ಪಂಗಡದ ಈಗಿರುವ ಶೇ 3 ರಿಂದ 7 ಕ್ಕೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಉಪ ಸಮಿತಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಸಮಿತಿಯ ಸದಸ್ಯರನ್ನು ಮುಖ್ಯಮಂತ್ರಿಯವರು ರಚಿಸಲಿದ್ದಾರೆ.
2021 ನೇ ಕ್ಯಾಲೆಂಡರ್ ವರ್ಷದ ರಜಾದಿನಗಳಿಗೆ ಒಪ್ಪಿಗೆ ನೀಡಲಾಯಿತು. 21 ದಿನಗಳು ಸಾರ್ವತ್ರಿಕ ರಜೆಗಳು, 19 ದಿನಗಳ ನಿರ್ಭಂದಿತ ರಜೆಗಳು ಒಳಗೊಂಡಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲ್ ಪಟ್ಟಣ ಪಂಚಾಯತಿಯನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನಿಸಲಾಯಿತು.
ವಿಜಯನಗರ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲು ಒಪ್ಪಿಗೆ ನೀಡಲಾಯಿತು. ಈ ಕುರಿತು ಸಧ್ಯದಲ್ಲೇ ಮಾರ್ಗಸೂಚಿ ಪ್ರಕಟಿಸಲಾಗುವುದು.
ಮರಾಠ ಸಮುದಾಯದ ನಿಗಮ ಪ್ರಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರ ನೆರೆ ಪರಿಹಾರ ಕಾಮಗಾರಿಗೆ ಪ್ರಾರಂಭಿಸಲು ಇತ್ತೀಚೆಗೆ 500 ಕೋಟಿ ರೂ. ಬಿಡುಗಡೆ ಮಾಡಿದೆ.
ಕೃಷ್ಣ ಜಲಭಾಗವಯ ನಿಗಮ, ಕಾವೇರಿ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ಧಿ ನಿಗಮಕ್ಕೆ ಸಾಲ ಪಡೆಯಲು ಸಚಿವ ಸಂಪುಟದಲ್ಲಿ ಒಪ್ಪಿಗೆ. ಲೋಕಸೇವಾ ಆಯೋಗದ ಅನುಮತಿ ಇಲ್ಲೆ ಕೇಂದ್ರ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಿ ಅಧಿಕಾರಿ ಪಡೆಯಲು ಒಪ್ಪಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು ಎಂದು ಸಚಿವ ಮಾಧುಸ್ವಾಮಿ ಅವರು ತಿಳಿಸಿದರು.