01 4 scaled

ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ….!.

STATE POLATICAL

ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ):
ಅಕ್ಟೋಬರ್ 28 ರಂದು ನಡೆದ ಚುನಾವಣೆಯಲ್ಲಿ ವಿಧಾನ ಪರಿಷತ್‍ಗೆ ಆಯ್ಕೆಯಾದ ನೂತನ 4 ಸದಸ್ಯರು ಪ್ರಮಾಣ ವಚನ ಸ್ವೀಕರಿüಸಿದರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್‍ಚಂದ್ರ ಶೆಟ್ಟಿ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಪುಟ್ಟಣ್ಣ, ಈಶಾನ್ಯ ಕ್ಷೇತ್ರದಿಮದ ಶಶೀಲ್ ಜಿ. ನಮೋಶಿ, ಪಶ್ಚಿಮ ಪದವೀಧರರ ಕ್ಷೇತ್ರದಿಂದ ಎಸ್.ವಿ. ಸಂಕನೂರ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಿಂದ ಚಿದಾನಂದಗೌಡ ಇವರುಗಳು ವಿಧಾನ ಪರಿಷತ್‍ಗೆ ಚುನಾಯಿತರಾದ ನೂತನ ಸದಸ್ಯರು.  ಎಲ್ಲರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಚಿವರಾದ ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಎ.ವೈ. ನಾರಾಯಣಸ್ವಾಮಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.