IMG 20201123 170008

ಸದ್ಯಕ್ಕೆ ಶಾಲಾ ಕಾಲೇಜು ತೆರೆಯಲ್ಲ….!

STATE Genaral

*ಕೋವಿಡ್ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಆರಂಭ ಬೇಡ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ*

*ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ‌ ನೆಡೆದ ಸಭೆಯಲ್ಲಿ ಡಿಸಂಬರ್ ಅಂತ್ಯದವರೆಗೆ ಶಾಲೆ ಆರಂಭ ಮಾಡದಿರಲು ತೀರ್ಮಾನ.

*ಡಿಸೆಂಬರ್ ನಲ್ಲಿ ಶಾಲೆ, ಪದವಿ ಪೂರ್ವ ಕಾಲೇಜು ಪುನರಾರಂಭ ಇಲ್ಲ*

ಬೆಂಗಳೂರು, ನ 23,ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ.

IMG 20201123 WA0015

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭ ಬೇಡ ಎಂದು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಡಿಸೆಂಬರ್ ನ ಚಳಿಗಾಲ ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವುದು ಬೇಡ ಎಂದು ಸಚಿವರು ಸಲಹೆ ನೀಡಿದರು.

IMG 20201123 WA0017

ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 3 ನೇ ವಾರದಲ್ಲಿ ಸಭೆ ನಡೆಸಿ, ಅವಲೋಕನ ಮಾಡಿ ನಿರ್ಧಾರ ತೆಗೆದುಕೊಳ್ಳಬಹುದು. ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಸಭೆಗೆ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.