IMG 20201125 WA0006

ಮಹಿಳೆಯರು ಉದ್ದಿಮೆ ಸ್ಥಾಪನೆಗೆ ಪ್ರೋತ್ಸಾಹ….!

STATE Genaral

*ಮಹಿಳಾ ಕೈಗಾರಿಕಾ ಪಾರ್ಕ್‌ಗಳಲ್ಲಿ ನಿವೇಶನಗಳ ಹಂಚಿಕೆಗೆ ಚಾಲನೆ ನೀಡಲಾಗಿದೆ: ಸಚಿವ ಜಗದೀಶ್‌ ಶೆಟ್ಟರ್‌*
*ಮಹಿಳಾ ಉದ್ದಿಮೆದಾರರಿಗೆ ಅಗತ್ಯ ಪ್ರೋತ್ಸಾಹ ನೀಡಲು ಬದ್ದ*

*ಬೆಂಗಳೂರು ನವಂಬರ್‌ 25:* ಬಹಳ ದಿನಗಳಿಂದ ಹಂಚಿಕೆ ಆಗದೇ ಇದ್ದ ಮಹಿಳಾ ಕೈಗಾರಿಕಾ ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಅಲ್ಲದೆ, ಮಹಿಳಾ ಉದ್ದಿಮೆದಾರರು ಹೆಚ್ಚಿನ ರೀತಿಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗುವಂತೆ ರಾಜ್ಯ ಸರಕಾರದ ವತಿಯಿಂದ ಅಗತ್ಯ ಪ್ರೋತ್ಸಾಹ ನೀಡಲು ಬದ್ದರಾಗಿದ್ದೇವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್‌ ಶೆಟ್ಟರ್‌ ಅವರು ಹೇಳಿದರು.

IMG 20201125 WA0005

ಮಹಿಳಾ ಉದ್ದಿಮೆದಾರರ ದಿನಾಚರಣೆ 2020 ಅಂಗವಾಗಿ ಇಂದು ಎಫ್‌ಕೆಸಿಸಿಐ ವತಿಯಿಂದ ಬೆಂಗಳೂರಿನ ಎಫ್ ಕೆ ಸಿ ಸಿ ಐ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಿಳಾ ಉದ್ಯಮಿ ಪಾರ್ಕ್‌ಗಳನ್ನು ಘೋಷಿಸಿ ಹಲವಾರು ವರ್ಷಗಳೇ ಸಂದಿವೆ. ಆದರೆ ಇದುವರೆಗೂ ಅವುಗಳಲ್ಲಿನ ಕೈಗಾರಿಕಾ ನಿವೇಶನಗಳ ಹಂಚಿಕೆ ಕಾರ್ಯವನ್ನು ಪ್ರಾರಂಭಿಸಿರಲಿಲ್ಲ. ಈಗ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರಾಜ್ಯದ ಎಲ್ಲಾ ಭಾಗಗಳಲ್ಲೂ ಇರುವ ಮಹಿಳಾ ಕೈಗಾರಿಕಾ ಪಾರ್ಕಿನ ನಿವೇಶನಗಳನ್ನು ಹಂಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

 

IMG 20201125 WA0007ಮಹಿಳೆಯರು ಉದ್ಯಮ ಸ್ಥಾಪಿಸಲು ಅಗತ್ಯ ಪ್ರೋತ್ಸಾಹ ನೀಡಲು ರಾಜ್ಯ ಸರಕಾರ ಬದ್ದವಾಗಿದೆ. ಅಲ್ಲದೆ, ಮಹಿಳೆಯರು ಯಾವುದೇ ಸಹಾಯವಿಲ್ಲದೆ ವಿಶೇಷ ಸವಲತ್ತುಗಳು ಹಾಗೂ ಮೀಸಲಾತಿ ಇಲ್ಲದೆ ಸ್ವಂತ ಬಲದಿಂದಲೇ ಉದ್ಯಮ ಸ್ಥಾಪಿಸುವ ಹಾಗೂ ಎಲ್ಲಾ ರೀತಿಯ ಕ್ಷೇತ್ರಗಳಲ್ಲೂ ಅಭಿವೃದ್ದಿಯನ್ನು ಸಾಧಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷರಾದ ಪೆರಿಕಲ್‌ ಎಂ ಸುಂದರ್‌, ಎಫ್‌ಕೆಸಿಸಿಐ ಮಹಿಳಾ ಉದ್ದಿಮೆದಾರರ ಸಮಿತಿಯ ಅಧ್ಯಕ್ಷೆ ರೂಪಾ ರಾಣಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳನ್ನು ಸಚಿವರು ವೀಕ್ಷಿಸಿದರು.