ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇಮಕ ಮಾಡಿದ್ದಾರೆ
ಸದ್ಯ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷರಾಗಿದ್ದಾರೆ
ಬಿ.ಎಸ್.ಪರಮಶಿವಯ್ಯ ಹಲವಾರು ವರ್ಷಗಳಿಂದ ವೀರಶೈವ ಲಿಂಗಾಯತ ಅಭಿವೃದ್ಧಿಗಾಗಿ ಸಾಮಾಜಿಕ ಕಾರ್ಯ, ಜೊತೆಗೆ ರಾಜಕೀಯವಾಗಿ ಗುರುತಿಸಿಕೊಂಡಿದ್ದು, ಈ ಹಿಂದೆ ವಿಧಾನ ಪರಿಷತ್ ಸದಸ್ಯರ ನೇಮಕದ ಪಟ್ಟಿಯಲ್ಲಿ ಅವರ ಹೆಸರಿತ್ತು. ಆದರೆ ಕೊನೆ ಘಳಿಗೆಯಲ್ಲಿ ಪರಮಶಿವಯ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ಕೈತಪ್ಪಿತ್ತು. ಈಗ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.