* ಗಡಿ ಭಾಗದ ಕನ್ನಡಿಗರ ಹಿತರಕ್ಷಣೆಗೆ ಬದ್ಧ
* ಕನ್ನಡ ಸಂಸ್ಕøತಿ, ಕಲೆಯನ್ನು ಬಿಂಬಿಸುವ ಸಾಂಸ್ಕøತಿಕ ಭವನ ನಿರ್ಮಾಣ.
ಬೆಂಗಳೂರು-ರಾಜ್ಯ ಸರ್ಕಾರ ದ ವಿವಿಧ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ದ ಹಿರಿಮೆಯ ಡಾ. ಸಿ ಸೋಮಶೇಖರ್ ವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹುದ್ದೆ ಗೆ ನೇಮಕ ಮಾಡಿದ್ದರೆ
ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳು ಹಾಗೂ ಅವುಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಗಡಿಭಾಗದಲ್ಲಿರುವ ಕನ್ನಡಿಗರ ಹಿತರಕ್ಷಣೆಗೆ ಬದ್ಧರಾಗಿರುವುದಾಗಿ ನೂತನವಾಗಿ ನೇಮಕಗೊಂಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ ಸೋಮಶೇಖರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ತಮ್ಮ ನಿವಾಸದಲ್ಲಿ ತಮ್ಮ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಸಂಸ್ಕøತಿ, ಕಲೆಯನ್ನು ಬಿಂಬಿಸುವ ಸಾಂಸ್ಕøತಿಕ ಭವನಗಳನ್ನು ನಿರ್ಮಾಣ ಮಾಡಲಾಗುವುದು ಈ ಮೂಲಕ ಕನ್ನಡತನವನ್ನು ಗಡಿ ಭಾಗದಲ್ಲಿ ಎತ್ತಿಹಿಡಿಯಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕನ್ನಡಕ್ಕೆ ತಮ್ಮ ಸೇವೆ ಹಾಗೂ ಕಾರ್ಯವನ್ನು ಪರಿಗಣಿಸಿ ಇಂತಹ ಜವದ್ಬಾರಿಯುತ ಸ್ಥಾನವನ್ನು ನೀಡಿದ್ದಾರೆ. ಇದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ತಮ್ಮ ಮೇಲೆ ಇಟ್ಟಿರುವ ಅಭಿಮಾನ, ವಿಶ್ವಾಸಕ್ಕೆ ಚ್ಯುತಿಬಾರದಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ.
ಡಾ. ಸಿ ಸೋಮಶೇಖರ್ ಅವರ ಮಾತನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ