IMG 20201206 WA0008

ನಾಡಿನಲ್ಲಿ ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರು ಶ್ರಮಿಸೋಣ- ಬಿಎಸ್ ವೈ

STATE Genaral

ನಾಡಿನಲ್ಲಿ ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರು ಶ್ರಮಿಸೋಣ

– ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಡಿಸೆಂಬರ್ 06 (ಕರ್ನಾಟಕ ವಾರ್ತೆ):
ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ-ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವಂತ ಸಂಕಲ್ಪ ಇಂದು ಮಾಡಬೇಕಾಗಿದೆ. ಸಮಾ ಸಮಾಜದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು, ಈ ನಿಟ್ಟಿನಲ್ಲಿ ನಾವು ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯ ಸ್ಮರಣಿಯ ದಿನದಂದು ನಾವು ಮಾನವೀಯತೆಯನ್ನು ಜಾಗೃತಗೊಳಿಸಬೇಕು, ನಾಡಿನಲ್ಲಿ ಶೋಷಣೆಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರು ಶ್ರಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ನೀಡಿದರು.

IMG 20201206 WA0007
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಇಂದು ಸಮಾಜ ಕಲ್ಯಾಣ ಇಲಾಖೆವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧದ ಮುಂಬಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಅಸ್ಪುಶೃತೆಯಂತ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡಿ, ಸಮ ಸಮಾಜಕ್ಕಾಗಿ ಶ್ರಮಿಸಿದ ಬಾಬ ಸಾಹೇಬ್ ಅಂಬೇಡ್ಕರ್ ನಮಗೆಲ್ಲರಿಗೂ ಸಹ ಆದರ್ಶ ಪ್ರಾಯಾರಾಗಿದ್ದಾರೆ. ಡಾ ಅಂಬೇಡ್ಕರ್ ಅವರದ್ದು ಬಹುಮುಖಿ ವ್ಯಕ್ತಿತ್ವ ದೇಶದ ಅಭಿವೃದ್ಧಿಗೆ ಬಾಬಾ ಸಾಹೇಬರ ಕೊಡುಗೆ ಅನನ್ಯವಾದದ್ದು, ಪ್ರಪಂಚ ಕಂಡಂತಹ ಅತ್ಯಂತ ಪ್ರಭಾವಶಾಲಿ ಪ್ರತಿಭಾವಂತ ಅರ್ಥಶಾಸ್ತ್ರಜ್ಞರು ಅವರಾಗಿದ್ದರು ಎಂದರು.
ಮಹಿಳೆಯರಿಗೆ ಸಮಾನ ಹಕ್ಕು. ಕಾರ್ಮಿಕರ ಕಲ್ಯಾಣ, ಶಿಕ್ಷಣ ಹಾಗೂ ಸ್ವಾತಂತ್ರದ ಹಕ್ಕಿಗಾಗಿ ಹೋರಾಡಿದ್ದಾರೆ. ದೇಶಕ್ಕೆ ಸಶಕ್ತ ಸಂವಿಧಾನ ನೀಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಒಂದು ಮೂರ್ತ ರೂಪ ನೀಡಿದರು. ವಿಶ್ವದಲ್ಲಿಯೇ ಮಾದರಿ ಅನಿಸಿಕೊಂಡ ಭಾರತದ ಸಂವಿದಾನ ಸಮಾನತೆ ಭಾತೃತ್ವ ಸೌಹಾರ್ದತೆಯನ್ನು ಸಾರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

IMG 20201206 WA0005
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಇಂದು ಸಮಾಜ ಕಲ್ಯಾಣ ಇಲಾಖೆವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧದ ಮುಂಬಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪುಷ್ಪನಮನ ಸಲ್ಲಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.