download 53

ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಜಿಗಣಿ ಗ್ರಾಮಸ್ಥರಿಗೆ ಜೀವನಾವಶ್ಯಕ ವಸ್ತುಗಳ ವಿತರಣೆ.

STATE Genaral

ಬೆಂಗಳೂರು ಏಪ್ರಿಲ್‌ 24: ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಇಂದು ಬೆಂಗಳೂರು ಹೊರವಲಯದ ಜಿಗಣಿ ಗ್ರಾಮದ ಸಾವಿರಾರು ಕುಟುಂಬಗಳಿಗೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.

9367d7b9 d223 45e9 8a98 0209062e42d6

ಕರೋನಾ ಕರ್ಪ್ಯೂನಿಂದ ತೊಂದರೆಗೀಡಾಗಿರುವ ಕಾರ್ಮಿಕರು, ನಿರ್ಗತಿಕರು ಹಾಗೂ ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಂತ್ರಸ್ತರಿಗೆ ಇಂದು ಜಿಗಣೀ ಪೋಲೀಸ್‌ ಠಾಣೆಯ ಬಳಿ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು. ಜಿಗಣಿ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿಶ್ವನಾಥ್‌ ಹಾಗೂ ಇನ್ಪೋಸಿಸ್‌ ಫೌಂಡೇಶನ್‌ ನ ಮ್ಯಾನೇಜರ್‌ ಚಂದ್ರು ಹಾಗೂ ಅವರ ತಂಡ ಸಾವಿರಕ್ಕೂ ಹೆಚ್ಚು ಜನರಿಗೆ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವಂತಹ ಬಾಕ್ಸನ್ನು ವಿತರಿಸಿದರು. ಈ ಕಾರ್ಯದಲ್ಲಿ ಜಿಗಣಿ ಪೋಲೀಸ್‌ ಠಾಣೆಯ ಸಿಬ್ಬಂದಿಗಳು ಕೈಜೋಡಿಸಿದ್ದು ವಿಶೇಷವಾಗಿತ್ತು. ಅಲ್ಲದೆ, ಮನೆ ಮನೆಗೂ ತೆರಳಿ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್‌ಗಳನ್ನೂ ವಿತರಿಸಲಾಯಿತು. ಸಾವಿರಕ್ಕೂ ಹೆಚ್ಚು ಜನರು ಈ ವಸ್ತುಗಳನ್ನು ಪಡೆದುಕೊಂಡರು. ಕರೋನಾ ಲಾಕ್‌ ಡೌನ್‌ ಪ್ರಾರಂಭದಿಂದಲೂ ಇನ್ಪೋಸಿಸ್‌ ಫೌಂಡೇಶನ್‌ ರಾಜ್ಯಾದ್ಯಂತ ಅಗತ್ಯ ಸಾಮಗ್ರಿಗಳನ್ನು ವಿತರಿಸುತ್ತಿದೆ. ಕಳೆದ ವಾರ ಸಿನೆಮಾ ರಂಗದ ಕಾರ್ಮಿಕರುಗಳಿಗೆ ಕಿಟ್‌ಗಳನ್ನು ವಿತರಿಸಲಾಗಿತ್ತು