ಪಾವಗಡ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಪಿ.ಸಿ. ನಾಗರಾಜ ಅವಿರೋಧವಾಗಿ ಆಯ್ಕೆ
ಪಾವಗಡ: ತಾಲೂಕು ಪಂಚಾಯಿತಿ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ .ಪಿ ಸಿ ನಾಗರಾಜ್ ಅವಿರೋಧವಾಗಿ ಆಯ್ಕೆಯಾದರು.
ಇಂದು ನಡೆದ ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಚುನಾವಣೆ ಗೆ ಪಿ ಸಿ ನಾಗರಾಜ್ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಸೋಮಣ್ಣ ಕಡಗೋಲ ಘೋಷಿಸಿದ್ದಾರೆ
ವೈ ಎನ್ ಹೊಸಕೋಟೆ ತಾಲ್ಲೂಕು ಪಂಚಾಯತ್ ಸದಸ್ಯರಾಗಿ ಕಾಂಗ್ರೆಸ್ ಪಕ್ಷದಿಂದ ಪಿ ಸಿ ನಾಗರಾಜ್ ಆಯ್ಕೆಯಾಗಿದ್ದರು.
ಈ ವೇಳೆ ತಾಲೂಕು ಪಂಚಾಯಿತಿ ಸದಸ್ಯರು ಮತ್ತು ಮುಖಂಡರು ಸ್ನೇಹಿತರು ನೂತನ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.