ಮುಖ್ಯ ಕಾರ್ಯದರ್ಶಿಯವರಿಗೆ ಬೀಳ್ಕೋಡುಗೆ
ಬೆಂಗಳೂರು, ಡಿಸೆಂಬರ್ 31, (ಕರ್ನಾಟಕ ವಾರ್ತೆ): ಇಂದು ನಿವೃತ್ತಿ ಹೊಂದುತ್ತಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.
ಇಂದು ನಗರದ ಕುಮಾರ ಕೃಪ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿಗಳು ಸೇರಿದಂತೆ ಕಾರ್ಯಾಲಯದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನೂತನ ಮುಖ್ಯಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ರವಿಕುಮಾರ್ ಅವರು ವಿಜಯಭಾಸ್ಕರ್ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟರು.