ಅನಧೀಕೃತ ಪೆಟ್ಟಿಗೆ ಅಂಗಡಿ ತೆರವಿಗೆ ಮುಂದಾದ ಪುರಸಭೆ….!
ಪಾವಗಡ: – ಅನಧಿಕೃತ ವಾಗಿ ಪಾವಗಡ ಪಟ್ಟಣದಲ್ಲಿ ತಲೆ ಎತ್ತಿರುವ ಎಲ್ಲಾ ಪೆಟ್ಟಿಗೆ ಅಂಗಡಿಗಳು ತಕ್ಣಣ ಖಾಲಿ ಮಾಡಬೇಕು ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಅನಧಿಕೃತ ಪೆಟ್ಡಿಗೆ ಗಳಿಗೆ ನೀಡಿರುವ ವಿದ್ಯುತ್ ಸಂಪರ್ಕ ವನ್ನು ಕಡಿತ ಗೊಳಿಸಲು ಕೆ ಇ ಬಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಪಾವಗಡ ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಇರುವ ಪೆಟ್ಟಿಗೆ ಅಂಗಡಿಗಳನ್ನು ಒಂದು ವಾರದಲ್ಲಿ ತೆರವು ಗೊಳಿಸಬೇಕು. ಇಲ್ಲವಾದರೆ ಪುರಸಭೆ ವತಿಯಿಂದ ಪೆಟ್ಟಿಗೆ ಅಂಗಡಿಗಳನ್ನು ತೆರವು ಕಾರ್ಯಾಚರಣೆ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ನವೀನ್ ಚಂದ್ರ ಹಾಗೂ ಪುರಸಭೆ ಅಧ್ಯಕ್ಷ ರಾಮಾಂಜಿನಪ್ಪ .ತಿಳಿಸಿದ್ದಾರೆ.