ಪಾವಗಡ. ತಾಲ್ಲೂಕಿನ ಬ್ಯಾಡನ್ಯೂರ್ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಿ ಎನ್ ನಾಗಣ್ಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು
ಈ ಸಂದರ್ಭದಲ್ಲಿ ರಾಜ್ಯ ಯುವ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಜಯಂತ್ ನಾಗಣ್ಣ ಮಾತನಾಡಿ ತಾಲೂಕಿನ ಅನೇಕ ಹಳ್ಳಿಗಳಲ್ಲಿ ನಮ್ಮ ತಂದೆ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ದಿವಂಗತ ಜಿ ಎನ್ ನಾಗಣ್ಣ ಅವರು ಜೆಡಿಎಸ್ ಪಕ್ಷದ ಪ್ರಬಲ ಮುಖಂಡರು ಅವರ ಹೆಸರಿನಲ್ಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ನೇತ್ರದಾನ ಜಾಗೃತಿ ಶಿಬಿರಗಳನ್ನು ಏರ್ಪಡಿಸಿದ್ದೇನೆ ಹಾಗೂ ಜೆಡಿಎಸ್ ಪಕ್ಷ ರೈತರ ಪರ ಬಡವರ ಪರ ಪಕ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಲರಾಮ ರೆಡ್ಡಿ ಮಾತನಾಡಿ ಗ್ರಾಮೀಣ ಪ್ರದೇಶಗಳ ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ನಮ್ಮ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಬೆಂಬಲಿತ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ರಾಜಕೀಯ ಸಂದಿಗ್ದ ಸ್ಥಿತಿಯಲ್ಲಿಯೂ ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ನಾನು ಸದಾ ಋಣಿಯಾಗಿ ಇರುವೆ ಎಂದು ಹೇಳಿದರು
ಸತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಮಂಜುನಾಥ ಚೌದರಿ. ಸುಮನ್. ತಾಲ್ಲೂಕು ಜೆಡಿಎಸ್ ರೈತ ಘಟಕದ ಅಧ್ಯಕ್ಷರಾದ ಗಂಗಾಧರ್ ನಾಯ್ಡು. ಹಾಗೂ ಜೆಡಿಎಸ್ ಪಕ್ಷದ ಅನೇಕ ಮುಖಂಡರು ಹಾಜರಿದ್ದರು
ವರದಿ ಬುಲೆಟ್ ವೀರಸೇನ ಯಾದವ್