ವೈ.ಎನ್.ಹೊಸಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ದೇವಾಲಯದಲ್ಲಿ ಕಳವು
ಪಾವಗಡ: – ವೈ.ಎನ್.ಹೊಸಕೋಟೆ ಹೋಬಳಿ ಸಿದ್ದಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಅಲಕೂರು ಆಂಜನೇಯಸ್ವಾಮಿ ದೇವಾಲಯದಲ್ಲಿ ಭಾನುವಾರ ರಾತ್ರಿ ದೇವಾಲಯದ ಹುಂಡಿ ಹೊಡೆದು ಕಳ್ಳತನ ಮಾಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ದೇವಾಲಯದಲ್ಲಿ ಕಳ್ಳತನ ತಡೆಯಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಕಳ್ಳರು ತಮ್ಮ ಕೈಚಳಕ ತೋರಿಸಿ ಡಿವಿಆರ್ ಯಂತ್ರವನ್ನೂ ಸಹಾ ಕದ್ದಿದ್ದಾರೆ. ಹುಂಡಿಯಲ್ಲಿ ಸುಮಾರು ಒಂದುವರೆ ಲಕ್ಷ ರೂಪಾಯಿಗಳ ಹಣ ಇರಬಹುದೆಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಕಳವಿನ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ವೈ.ಎನ್.ಹೊಸಕೋಟೆ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.