ಅರಸಿಕೆರೆ ಸರ್ಕಾರಿ ಪೌಢಶಾಲೆ ಯ ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳಿಂದ ಮಕ್ಕಳಿಗೆ ಟ್ಯಾಬ್ ವಿತರಣೆ
*ಪಾವಗಡ* : ಹಳೆ ವಿದ್ಯಾರ್ಥಿಗಳು ಮತ್ತು ದಾನಿಗಳ ನೇತೃತ್ವದಲ್ಲಿ ಮಕ್ಕಳಿಗೆ ಟ್ಯಾಬ್ ಮತ್ತು ಗ್ರೀನ್ ಬೋರ್ಡ್ ವಿತರಿಸುವ ಕಾರ್ಯಕ್ರಮವನ್ನ ತಾಲ್ಲೂಕಿನ ಅರಸೀಕರೆ ಸರ್ಕಾರಿ ಪ್ರೌಢಶಾಲೆ ಯಲ್ಲಿ ಆಯೋಜಿಸಲಾಗಿತ್ತು.
ಇದೇ ವೇಳೆ ಸುಮಾರು 38 ವಿದ್ಯಾರ್ಥಿಗಳಿಗೆ 19 ಟ್ಯಾಬ್ ಗಳನ್ನು ವಿತರಿಸಲಾಯಿತು. ಜೊತೆಗೆ ಶಾಲೆಗೆ 4 ಬೋರ್ಡ್ಗಳನ್ನ ಕೊಡುಗೆಯಾಗಿ ನೀಡಿ ಶೈಕ್ಷಣಿಕಾಭಿವೃದ್ಧಿಗೆ ಪ್ರೋತ್ಸಾಹಿಸಲಾಯಿತು.
ನಂತರ ಮಾತನಾಡಿದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪವನ್ ಕುಮಾರ್ ರೆಡ್ಡಿಯವರು ಆಧುನಿಕ ಜಗತ್ತಿನಲ್ಲಿ ಶಿಕ್ಷಣದ ಪಾತ್ರ ಮಹತ್ವಪೂರ್ಣವಾಗಿದೆ.ಅದಕ್ಕಾಗಿ ವಿದ್ಯಾರ್ಥಿಗಳು ತಮ್ಮ ಸಂಕಲ್ಪಗಳನ್ನ ದೊಡ್ಡ ಮಟ್ಟದಲ್ಲಿ ಸಂಕಲ್ಪಿಸಿಕೊಳ್ಳಬೇಕು ಆಗ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದರು. ಇಂತಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ಟ್ಯಾಬ್ ಹಂಚುವ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಇದನ್ನ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ರೇಣುಕರಾಜ್ ಮಾತನಾಡುತ್ತ ನಮ್ಮ ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕಾಭಿವೃದ್ದಿಗೆ ಮಹೋನ್ನತ ಕಾರ್ಯಕ್ರಮಗಳನ್ನ ಆಯೋಜಿಸಲಾಗುತ್ತಿದೆ.ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಅಭಿವೃಧ್ದಿಗೊಳ್ಳುತ್ತಿದೆ ಇದಕ್ಕೆಲ್ಲ ನಮ್ಮ ಶಿಕ್ಷಣ ಇಲಾಖೆ ಮತ್ತು ಹಳೆ ವಿದ್ಯಾರ್ಥಿಗಳು , ದಾನಿಗಳ ಕೊಡುಗೆ ಅಪಾರವಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ದಾನಿ ಕುಣಿಗಲ್ ಬೆಸ್ಕಾಂ ಎ.ಇ.ಇ ರಂಗಸ್ವಾಮಿ ಮಾತನಾಡಿ ನಾನು ವಿದ್ಯಾಭ್ಯಾಸ ಮಾಡಿದ ಶಾಲೆಗೆ ಇಂತಹ ಪುಣ್ಯ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ವೇಳೆ ಅಕ್ಷರ ದಾಸೋಹ ಅಧಿಕಾರಿ ಹನುಮಂತರಾಯಪ್ಪ, ಅಂತರಗಂಗೆ ಶಂಕರಪ್ಪ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜು, ಅಂತ್ಯೋದಯ ಸಂಸ್ಥೆ ಮುಖ್ಯಸ್ಥ ಮುನಿಸ್ವಾಮಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಗಿರೀಶ್ ,ಮುಖ್ಯ ಶಿಕ್ಷಕರಾದ ತಿಮ್ಮಪ್ಪ, ಶಿಕ್ಷಕರಾದ ಶಿವಮೂರ್ತಿನಾಯ್ಕ,ರಂಗನಾಥ,ಶಿವಕುಮಾರ್,ನಾಗರಾಜು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ನವೀನ್ ಕಿಲಾರ್ಲಹಳ್ಳಿ*