IMG 20210114 WA0010

ಬಿಜೆಪಿ ಗೆಲುವಿನ ಓಟ ನಿರಂತರ….!

STATE POLATICAL

ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ

ಬಿಜೆಪಿ ಗೆಲುವಿನ ಓಟ ನಿರಂತರ- ಅರುಣ್ ಸಿಂಗ್

ಬೆಂಗಳೂರು: ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ದೇಶದ ಅಭಿವೃದ್ಧಿಯ ನೇತೃತ್ವ ವಹಿಸಿದ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಅತ್ಯುತ್ತಮ ಕಾರ್ಯಕ್ರಮಗಳು ಮತ್ತು ಸರ್ವರನ್ನು ಜೊತೆಗೊಯ್ಯುವ ಮಹತ್ವದ ಕಾರ್ಯ ಮಾಡುತ್ತಿರುವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತವೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯದ ಉಸ್ತುವಾರಿಗಳೂ ಆದ ಶ್ರೀ ಅರುಣ್ ಸಿಂಗ್ ಅವರು ವಿಶ್ಲೇಷಿಸಿದರು.

ರಾಜ್ಯದಲ್ಲಿಯೇ ನಡೆದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಇನ್ನೊಂದೆಡೆ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಶ್ವದ ಜನಪ್ರಿಯ ಮತ್ತು ಪ್ರಭಾವಿ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದರು.

ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಗ್ರಾಮ ಪಂಚಾಯತ್‍ಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಅದರ ಸದುಪಯೋಗ ಆಗಬೇಕು; ದುರುಪಯೋಗ ಆಗದಿರಲಿ. ಯುವಕರು ಮತ್ತು ಮಹಿಳೆಯರು ಮೋರ್ಚಾಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದು ತಿಳಿಸಿದರು.

IMG 20210114 WA0011
ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಕರ್ನಾಟಕವನ್ನು ಅಭಿವೃದ್ಧಿ ಹೊಂದಿದ ನಾಡಾಗಿ ಪರಿವವರ್ತಿಸುವ ನಿರಂತರ ಪ್ರಯತ್ನ ನಮ್ಮದಾಗಲಿ. ಸ್ವಾರ್ಥರಹಿತ ಚಿಂತನೆಯ ಆರೆಸ್ಸೆಸ್ ಕಾರ್ಯಕರ್ತರು ನಮಗೆ ಮಾದರಿ ಆಗಲಿ ಎಂದು ಆಶಿಸಿದರು. ಎಲ್ಲರಿಗೂ ಮನೆ ನಿರ್ಮಿಸಿ ಕೊಡುವುದು ಮತ್ತು ಮೂಲಸೌಕರ್ಯ ಕಲ್ಪಿಸುವ ಆಶಯ ಈಡೇರಲಿದೆ ಎಂದು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ, ಗ್ರಾಮ ಪಂಚಾಯತ್‍ಗಳಲ್ಲಿ 45 ಸಾವಿರ ಜನ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಗ್ರಾಮ ಸ್ವರಾಜ್ಯ ಪರಿಕಲ್ಪನೆಯಡಿ ಶ್ರೀ ಮೋದಿ ಮತ್ತು ಶ್ರೀ ಯಡಿಯೂರಪ್ಪ ಅವರ ಅತ್ಯುತ್ತಮ ಕಾರ್ಯವೈಖರಿಯೇ ಇದಕ್ಕೆ ಕಾರಣ ಎಂದರು.
ಕನಕಪುರದಲ್ಲೂ ಬಿಜೆಪಿ ಗೆದ್ದಿದೆ. ಬಾದಾಮಿಯಲ್ಲೂ ಉತ್ತಮ ಸಾಧನೆ ಮಾಡಿದೆ. ಹಾಸನ ಮತ್ತು ಮಂಡ್ಯದಲ್ಲೂ ಕೇಸರಿ ಧ್ವಜ ಹಾರಾಡುತ್ತಿದೆ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ. ಆರು ವರ್ಷಗಳಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಪರಿಶ್ರಮ ಮತ್ತು ಶ್ರೀ ಯಡಿಯೂರಪ್ಪ ಅವರು ಸಾಧನಾಶೀಲತೆಯೇ ಇದಕ್ಕೆ ಕಾರಣ ಎಂದು ವಿವರಿಸಿದರು.
ಕಾಂಗ್ರೆಸ್‍ಗೆ ಗೋಮಾತೆಯ ಶಾಪ ತಟ್ಟಿದೆ. ಹಸು ಮತ್ತು ಕರುವಿನ ಚಿಹ್ನೆಯಡಿ ಅಧಿಕಾರ ಪಡೆದಿದ್ದ ಕಾಂಗ್ರೆಸ್ಸಿಗರು ಗೋಹಂತಕರ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್‍ನ ಹಿಂದಿನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಗೋಮಾಂಸ ತಿನ್ನುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.
ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ, ಸಚಿವರಾದ ಶ್ರೀ ಆರ್.ಅಶೋಕ್, ಶ್ರೀ ಸುರೇಶ್‍ಕುಮಾರ್, ಶ್ರೀ ಗೋಪಾಲಯ್ಯ, ಶ್ರೀ ಎಸ್.ಟಿ.ಸೋಮಶೇಖರ್, ರಾಜ್ಯ ಉಪಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಅರವಿಂದ ಲಿಂಬಾವಳಿ, ಸಂಸದರಾದ ಶ್ರೀ ಪಿ.ಸಿ.ಮೋಹನ್, ಶ್ರೀ ಪ್ರತಾಪ್‍ಸಿಂಹ, ಶ್ರೀ ವಿಜಯೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಅಶ್ವತ್ಥನಾರಾಯಣ, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮುಖಂಡರು, ಶಾಸಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.