ಕುರುಬ ಸಮುದಾಯಕ್ಕೆ ಎಸ್.ಟಿ ನೀಡಬೇಕೆಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ ನಡೆದ 21 ದಿನಗಳ ಪಾದಯಾತ್ರೆ ಇಂದು ನಗರದ ರೈಲು ನಿಲ್ದಾಣದ ಬಳಿ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಸೇರಿ ಸೇರಿತು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ, ಪೌರಾಡಳಿತ ಸಚಿವರಾದ ಶ್ರೀ ಎಂ.ಟಿ.ಬಿ.ನಾಗರಾಜ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್ ವಿಶ್ವನಾಥ, ಮಾಜಿ ಸಚಿವರಾದ ಶ್ರೀ ಹೆಚ್.ಎಮ್.ರೇವಣ್ಣ ಮಾಜಿ ಸಂಸದರಾದ ಶ್ರೀ ಕೆ.ವಿರೂಪಾಕ್ಷಪ್ಪ ಸಮಾಜದ ಪ್ರತಿನಿಧಿಗಳಾಗಿ ಭಾಗವಹಿಸಿದ್ದರು.