IMG 20210217 WA0023

ರಾಜಕೀಯ ಕರ್ಮಭೂಮಿಯ ಋಣ ತೀರಿಸುವೆ….!

STATE Genaral

ರಾಜಕೀಯ ಕರ್ಮಭೂಮಿಯ ಋಣ ತೀರಿಸುವೆ

ಸಚಿವ ಮುರುಗೇಶ್ ನಿರಾಣಿ ಘೋಷಣೆ

‘ ಬೀಳಗಿ ಕ್ಷೇತ್ರದ ಸಮಸ್ಯೆಗೆ ಮೊದಲ ಆದ್ಯತೆ

‘ ಮೂಲಭೂತ ಸೌಕರ್ಯಗಳ ಒತ್ತು

ಬಾಗಲಕೋಟೆ : – ತಮಗೆ ರಾಜಕೀಯ ಜನ್ಮ ನೀಡಿದ ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ
ಜನತೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮರುಗೇಶ್ ನಿರಾಣಿ ಅವರು
ಹೇಳಿದ್ದಾರೆ.
ಬುಧವಾರ ಬೀಳಗಿ ವಿಧಾನಸಭಾ ಕ್ಷೇತ್ರದ ಕಲಾದಗಿ ಗ್ರಾಮದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸಮಸ್ಯೆಗಳನ್ನು ಇತ್ಯಾರ್ಥಪಡಿಸುವುದು ತಮ್ಮ ಮೊದಲ ಆದ್ಯತೆ ಎಂದು ವಾಗ್ದಾನ ಮಾಡಿದರು.
ಇಂದಿನ ಜನಸಂಪರ್ಕ ಸಭೆಯಲ್ಲಿ ಜನತೆಯು ಮುಂದಿಟ್ಟರುವ ಸಮಸ್ಯೆಗಳನ್ನು ನಾನೇ ಪಟ್ಟಿ ಮಾಡಿಕೊಂಡಿದ್ದೇನೆ. ಬರುವ ಬಜೆಟ್ ನಲ್ಲಿ ಸಚಿವರು ಮ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಈಡೇರಿಸುವುದಾಗಿ ಆಶ್ವಾಸನೆ ನೀಡಿದರು.

ಕೆಲವು ಕಡೆ ರಸ್ತೆ, ಒಳಚರಂಡಿ ಸೇತುವೆ ಹಾಗೂ ಬ್ಯಾರೇಜ್ ನಿರ್ಮಾಣ ಮಾಡಬೇಕೆಂಬ ಬೇಡಿಕೆಯನ್ನು ಜನತೆ ಮುಂದಿಟ್ಡಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ಹಾಡುವುದಾಗಿ ಹೇಳಿದರು.
ಈ ಹಿಂದೆ ನಾನು ಸಚಿವನಾಗಿದ್ದ ವೇಳೆ ಸುಮಾರು ₹70 ಕೋಟಿ ವೆಚ್ಚದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಬ್ಯಾರೇಜ್ ನಿರ್ಮಿಸಲು ಮುಂದಾಗಿದ್ದೆ. ಆದರೆ, ನಂತರ ಅಧಿಕಾರಕ್ಕೆ ಬಂದವರು ಇದರ ಬಗ್ಗೆ ಗಮನ ಹರಿಸಲಿಲ್ಲ ಎಂದು ನಿರಾಣಿ ಅವರು ಬೇಸರ ವ್ಯಕ್ತಪಡಿಸಿದರು.

IMG 20210217 WA0024
ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಹೊಸ ‘ ಮರಳು ನೀತಿ’ಯನ್ನು ಜಾರಿ ಮಾಡಲಾಗುವುದು ಎಂದರು.
ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಸಿಗುತ್ತಿರಲಿಲ್ಲ.ಇಲ್ಲಿಯವರೆಗೆ ಎಲ್ಲದಕ್ಕೂ ಕಡಿವಾಣವಿತ್ತು.ಇದನ್ನು ತಪ್ಪಿಸುವುದಕ್ಕಾಗಿ ಉದ್ದೇಶದಿಂದ ಎತ್ತಿನಗಾಡಿ,ಟ್ರ್ಯಾಕ್ಟರ್ ಗಳಲ್ಲಿ ತರಲು ಅವಕಾಶ ನೀಡಲಾಗುವುದೆಂದು ಹೇಳಿದರು.

ತಮಗೆ ರಾಜಕೀಯ ಜನ್ಮ ನೀಡಿದ ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಜನತೆಯು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.