ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಇಂದು ರಾಜ್ಯಪಾಲರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಆಧಿಕಾರಿಗಳನ್ನು ರಾಜಭವನಕ್ಜೆ ಕರೆಸಿಕೊಂಡು ಮಾಹಿತಿ ಪಡೆದರು.
ಕರೋನ ಸೋಂಕಿತರಿಗೆ ಆಮ್ಲಜನಕ ಪೂರೈಕೆ, ಔಷಧ ಹಾಗೂ ಹಾಸಿಗೆ ವ್ಯವಸ್ಥೆಯನ್ನು ಯಾವುದೇ ಲೋಪವಿಲ್ಲದಂತೆ ಕಲ್ಪಿಸಬೇಕೆಂದು ಈ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರು ರಾಜ್ಯದ ಕೋವಿಡ್-19 ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೀದ್ ಅಕ್ತರ್ ಅವರೊಂದಿಗೆ ಭಾನುವಾರ ದ ತುರ್ತು ಸಭೆಯಲ್ಲಿ ಭಾಗವಹಿಸಿದ್ದರು..
ಸ