IMG 20210426 201849

‘ ಲಾಕ್ ಡೌನ್ ‘ ಪದ ಬಳಸದೆ ‘ಲಾಕ್ ‘ ಮಾಡಿದ – ಸಿಎಂ

Genaral STATE

ಕೋವಿಡ್ – 19 ರ ನಿಯಂತ್ರಣಕ್ಕೆ   ರಾಜ್ಯಾದ್ಯಂತ ಮುಂದಿನ 14 ದಿನಗಳು ಬಿಗಿ ಕ್ರಮ

ಲಾಕ್ ಡೌನ್ ಪದ ಬಳಸದೆ ಲಾಕ್ ಮಾಡಿದ – ಸಿಎಂ                                                        
ಬೆಂಗಳೂರು, ಏಪ್ರಿಲ್ 26: ಕೋವಿಡ್  ಸಾಂಕ್ರಾಮಿಕ  ಹೆಚ್ಚಾಗುತ್ತಿರುವುದನ್ನು ತಡೆಗಟ್ಟಲು ಹಿನ್ನೆಲೆಯಲ್ಲಿ  ಮುಂದಿನ 14 ದಿನಗಳ ಕಾಲ ಕಟ್ಟುನಿಟ್ಟಿನ  ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು. .

ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು ನಾಳೆ ರಾತ್ರಿ 9 ಗಂಟೆಯಿಂದ  ಮುಂದಿನ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.IMG 20210426 201857

ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಮಾಡುತ್ತಿದ್ದೀರ ಎಂದು ಪದೆ- ಪದೆ ಪ್ರಶ್ನೆ  ಕೇಳಿದರು ಅದಕ್ಕೆ ಉತ್ರರ ನೀಡದೆ, ಬಿಗಿ ಕ್ರಮ ಅಷ್ಟೇ ಎಂದರು.

ಈ ಕೋವಿಡ್ ಸೋಂಕು ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಾ ಮುತ್ತಾ ಹೆಚ್ಚು ಹರಡುತ್ತಿದೆ, ಹೀಗಾಗಿ ಸಚಿವ ಸಂಪುಟ ಸದಸ್ಯರು, ತಜ್ಞರ ಜೊತೆಗೆ ಚರ್ಚಿಸಿ, ಕೆಲವು ನಿರ್ಧಾರಕ್ಕೆ ಬಂದಿದ್ದೇವೆ.

IMG 20210426 201834

ಮೊದಲನೆಯದು ಸರ್ಕಾರಿ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುತ್ತದೆ. ಈ ಬಗ್ಗೆ ರೂಪುರೇಷೆಗಳನ್ನು ಆರೋಗ್ಯ ಇಲಾಖೆ ಪ್ರಕಟಿಸಲಿದೆ. ಈ ಕೋವಿಡ್ ತಡೆಯೋದಕ್ಕೆ ಬಿಗಿ ಕ್ರಮವಾಗಿ ನಾಳೆ ರಾತ್ರಿಯಿಂದ 14 ದಿನ ಬಿಗಿ ಕ್ರಮ ಜಾರಿಯಲ್ಲಿರುತ್ತದೆ. ಇದು ರಾಜ್ಯಾಧ್ಯಂತ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದರು.IMG 20210426 140536

ಬೆಳಿಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ನಂತ್ರ ಎಲ್ಲವೂ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ. ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನಂತೆ ಇರಲಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ರವೆರೆಗ ಕರ್ಪ್ಯೂ ಮುಂದುವರೆಯಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಬಂದೋಬಸ್ತ್ ಮಾಡಲಿದ್ದಾರೆ. ತಾಲೂಕು ಆಡಳಿತ ಕೂಡ ನಿಯಂತ್ರಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.