IMG 20210429 144942

ಕೊರೊನಾ:ಲಾಕ್ ಡೌನ್ ಕಟ್ಟುನಿಟ್ಟು ಜಾರಿ….!

Genaral STATE

ಕರ್ಫ್ಯೂ ನಿರ್ಬಂಧಗಳ ಕಟ್ಟುನಿಟ್ಟು ಜಾರಿಗೆ ಸಿಎಂ ಸೂಚನೆ-
‌ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜಾರಿಗೊಳಿಸಲಾಗಿರುವ 14ದಿನಗಳ ಕರ್ಫ್ಯೂ ಸಂದರ್ಭದಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಿರ್ಬಂಧಗಳ ಅನುಷ್ಠಾನ ಮೇಲುಸ್ತುವಾರಿಗೆ ಐದು ಜನ ಎಡಿಜಿಪಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

IMG 20210429 144948

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಸಿಎಂ ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ ಬೊಮ್ಮಾಯಿ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಕೋವಿಡ್ ಕೆಲಸಕ್ಕಾಗಿ 8500 ಜನ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಬಳಕೆ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಇನ್ನು ಹೆಚ್ಚಿನ ಸಿಬ್ಬಂದಿಯನ್ನು ಒದಗಿಸಲು ಸಿದ್ದರಿದ್ದೇವೆ ಎಂದು ಅವರು ತಿಳಿಸಿದರು.IMG 20210429 170810

ರಾಜ್ಯದ ಎಲ್ಲಾ ಕಾರಾಗೃಹಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಿದ್ದೇನೆ. ಜೈಲುಗಳಲ್ಲಿನ ಪಾಸಿಟಿವ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸೋಂಕಿತ ಖೈದಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯಕ್ಕೆ ಪರೀಕ್ಷೆ  ನಡೆಯುತ್ತಿದೆ ನಿಯಂತ್ರಣದಲ್ಲಿದೆ. ರಾಜ್ಯದ ಎಲ್ಲಾ ಕಾರಾಗೃಹ ಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುತ್ತಿರುವುದಾಗಿ ಅವರು ತಿಳಿಸಿದರು.IMG 20210429 144932

ಬೆಂಗಳೂರು ನಗರದಲ್ಲಿ 15000 ಜನ ಸಿವಿಲ್ ಡಿಫೆನ್ಸ್ ತರಬೇತಿ ಹೊಂದಿರುವ ಜನ ಇದ್ದಾರೆ. ಅವರನ್ನು ಪ್ರತಿ ವಾರ್ಡಿನಲ್ಲಿ ಕೋವಿಡ್ ಸೋಂಕಿತರನ್ನು ಪತ್ತೆಹಚ್ಚಲು ಮತ್ತು ಐಸೋಲೇಶನ್ ಕೆಲಸಕ್ಕೆ ಬಳಕೆ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ನಗರದಲ್ಲಿ ಶುಚಿತ್ವ ಕಾಪಾಡಲು ಅಗ್ನಿಶಾಮಕ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಬಾಂಗ್ಲಾದೇಶ ದ ರೆಮ್ ಡಿಸಿವಿರ್ ಔಷಧಿ

ಮೇಡ್ ಇನ್ ಬಾಂಗ್ಲಾದೇಶ ಎಂದು ಹೆಸರಿರುವ ರೆಮ್ ಡಿಸಿವಿರ್ ಔಷಧಿ ಮಾರಾಟ ಪ್ರಕರಣವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕೆಲವರನ್ನು ಬಂಧಿಸಲಾಗಿದೆ. ಈ ಔಷಧ ಬೆಂಗಳೂರಿಗೆ ಹೇಗೆ ಬಂತು? ಯಾವ ಆಸ್ಪತ್ರೆಯಿಂದ ಬಂತು? ಇದನ್ನು ಇಲ್ಲಿಗೆ ತಂದ ವ್ಯಕ್ತಿ ಯಾರು? ಎಂಬುದರ ಕುರಿತು ತನಿಖೆ ನಡೆಯುತ್ತಿದೆ

ಸಭೆಯ ಮುಖ್ಯಾಂಶಗಳು

IMG 20210429 170742